ಮಡಿಕೇರಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಮತ್ತು ಪೂರ್ಣಗೊಂಡಿರುವ ಯೋಜನೆಗಳನ್ನು ಉದ್ಘಾಟಿಸಲು ಇಂದು ( ಜನವರಿ 25 ) ಮುಖ್ಯಮಂತ್ರಿ ಸಿದ್ದರಾಮಯ್ಯ ವಿರಾಜಪೇಟೆ ಹಾಗೂ ಮಡಿಕೇರಿಗೆ ಆಗಮಿಸುತ್ತಿರುವ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಮಡಿಕೇರಿ ಮತ್ತು ವಿರಾಜಪೇಟೆ ಭಾಗದಲ್ಲಿ ಬಂದೋಬಸ್ತ್‌ಗಾಗಿ ಸುಮಾರು ಒಂದು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರ ನಿರ್ದೇಶನದಂತೆ ಮೈತ್ರಿ ಪೊಲೀಸ್ ಸಭಾಂಗಣದಲ್ಲಿ ಪೊಲೀಸರ ಸಭೆ ನಡೆಸಲಾಗಿದೆ.
ಮುಖ್ಯಮಂತ್ರಿಗಳ ಆಗಮನದ ಸಂದರ್ಭ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಲಾಗಿದೆ. ಮಂಡ್ಯ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸುಮಾರು 500 ಪೊಲೀಸರು ಮಡಿಕೇರಿಗೆ ಆಗಮಿಸಿದ್ದಾರೆ. 2023 ರಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನದಲ್ಲಿದ್ದ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಬಂದಿದ್ದಾಗ ಅವರ ಕಾರಿನ ಮೇಲೆ ಮೊಟ್ಟೆ ದಾಳಿಯಾಗಿತ್ತು. ಆದ್ದರಿಂದ ಈ ಬಾರಿ ಪೊಲೀಸ್ ಬಂದೋ ಬಸ್ತ್ ಬಿಗಿಗೊಳಿಸಲಾಗಿದೆ.
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…
2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…