ಬೆಂಗಳೂರು: ಟಿಪ್ಪು ಎಕ್ಸ್ ಪ್ರೆಸ್ ಮತ್ತು ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರುಗಳನ್ನು ರೈಲ್ವೆ ಇಲಾಖೆ ಬದಲಾವಣೆ ಮಾಡಿದೆ.
ಮೈಸೂರು -ತಾಳಗುಪ್ಪ ನಡುವೆ ಸಂಚರಿಸುವ ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿಗೆ ಇನ್ನು ಮುಂದೆ ಕುವೆಂಪು ಎಕ್ಸ್ ಪ್ರೆಸ್ ರೈಲು ಎಂದು ಬದಲಾವಣೆ ಮಾಡಲಾಗಿದೆ.
ಈ ಸಂಬಂಧ ಕೇಂದ್ರ ರೈಲ್ವೆ ಮಂಡಳಿ ಅದೇಶವನ್ನು ಹೊರಡಿಸಿದೆ. ಮೈಸೂರು ತಾಳಗುಂದ ಎಕ್ಸ್ಪ್ರೆಸ್ ರೈಲಿಗೆ ಕುವೆಂಪು ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡಿರುವುದಾಗಿ ರೈಲ್ವೆ ಮಂಡಳಿಯ ಉಪನಿರ್ದೇಶಕ ರಾಜೇಶ್ ಕುಮಾರ್ ಅವರು ನೈರುತ್ಯ ರೈಲ್ವೆ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.
ಶುಕ್ರವಾರದ ಶುಭ ಸುದ್ದಿ!
ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು "ಕುವೆಂಪು ಎಕ್ಸ್ಪ್ರೆಸ್'' ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್ @AshwiniVaishnaw ji ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ @JoshiPralhad ಸರ್! pic.twitter.com/uZzHt1uzZz
— Pratap Simha (Modi Ka Parivar) (@mepratap) October 7, 2022
ರೈಲ್ವೆ ಸಚಿವಾಲಯ ಆದೇಶ ಪತ್ರವನ್ನು ತಮ್ಮ ಟ್ವೀಟರ್ ನಲ್ಲಿ ಸಂಸದ ಪ್ರತಾಪ್ ಸಿಂಹ ರವರು ಹಂಚಿಕೊಂಡು ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು ಒಡೆಯರ್ ಎಕ್ಸ್ಪ್ರೆಸ್ ನಿಮಗೆ ಸೇವೆ ಒದಗಿಸಲಿದೆ. ಜೊತೆಗೆ ಮೈಸೂರು ತಾಳಗುಪ್ಪ ಬದಲು ಕುವೆಂಪು ಎಕ್ಸ್ಪ್ರೆಸ್ ಆಗಿ ಬದಲಾಗಿದೆ ಇದಕ್ಕೆ ಕಾರಣರಾದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಸಚಿವ ಪ್ರಹ್ಲಾದ್ ಜೋಶಿ ಹಾಗೂ ಕುವೆಂಪು ಹೆಸರು ಸೂಚಿಸಿದ ಡಿ.ಪಿ ಸತೀಶ್ ಅವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.