ಜಿಲ್ಲೆಗಳು

ಟಿಪ್ಪು ಹಿಂದೂ ವಿರೋಧಿ ಆಗಿರಲಿಲ್ಲ : ಶಾಸಕ ಪುಟ್ಟರಂಗಶೆಟ್ಟಿ

ಚಾಮರಾಜನಗರ: ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಟಿಪ್ಪು ಸುಲ್ತಾನ್ ಅವರು ಹಿಂದೂ ವಿರೋಧಿ ಹಾಗೂ ಧರ್ವಾಂಧ ಆಗಿರಲಿಲ್ಲ ಎಂದು ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.
ನಗರದ ಗಾಳಿಪುರ ಬಡಾವಣೆಯಲ್ಲಿ ಟಿಪ್ಪು ವೆಲ್‌ಫೇರ್ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿದ್ದ ಹಜರತ್ ಟಿಪ್ಪು ಸುಲ್ತಾನ್ ಅವರ ಸ್ಮರಣೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಟಿಪ್ಪು ಹಿಂದೂ ವಿರೋಧಿಯಾಗಿದ್ದರೆ ದೇವಸ್ಥಾನಗಳಿಗೆ ಕೊಡುಗೆ ನೀಡುತ್ತಿರಲಿಲ್ಲ ಎಂದರು.
ಟಿಪ್ಪು ಸುಲ್ತಾನ್ ಉತ್ತಮ ಆಡಳಿತಗಾರನಾಗಿ ಅನೇಕ ಸುಧಾರಣೆ ಮಾಡಿದ್ದರು. ಹಿಂದೂ, ಮುಸ್ಲಿಂ ಎನ್ನದೆ ಸಮಾನತೆ ಕೊಟ್ಟಿದ್ದಾರೆ. ಕೆಲವರು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಟಿಪ್ಪು ಇತಿಹಾಸವನ್ನು ತಿರುಚುತ್ತಿದ್ದಾರೆ ಎಂದರು.
ಮಾಜಿ ಶಾಸಕ ವಾಟಾಳ್ ನಾಗರಾಜ್ ಮಾತನಾಡಿ, ನಾಡಿಗಾಗಿ ತನ್ನ ಇಬ್ಬರು ಮಕ್ಕಳನ್ನು ಬ್ರಿಟಿಷರಿಗೆ ಒತ್ತೆ ಇಟ್ಟಿದ್ದ ಟಿಪ್ಪು ದೇಶ ಕಂಡ ಎತ್ತರದ ವ್ಯಕ್ತಿತ್ವ. ಅವರ ಬಗ್ಗೆ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದು ಹೇಳಿದರು.
ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮಾತನಾಡಿದರು. ಮೈದಾನದಲ್ಲಿ ಟಿಪ್ಪು ಲಾಂಛನವಿರುವ ಬಾವುಟ ಹಾರಿಸಲಾಯಿತು. ಮುಖಂಡರಾದ ಸೈುಂದ್ ರಫಿ, ನಾಯಾಜ್, ಅಸ್ಲಾಂ ಷರೀಫ್, ಜಾಕೀರ್ ಪಾಷ, ಅಕ್ರಂ, ತೇಜವುಲ್ಲಾ ಖಾನ್, ನೂರ್ ವುಲ್ಲಾಖಾನ್, ನವೀದ್ ಖಾನ್ ಇತರರು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

52 mins ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

54 mins ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

56 mins ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

57 mins ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

1 hour ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

1 hour ago