ಚಿತ್ರದುರ್ಗ: ಟಿಪ್ಪು ಸುಲ್ತಾನ್ ಇತಿಹಾಸಕ್ಕೆ ಸಂಬಂಧಿಸಿದಂತೆ ರಂಗಾಯಣದ ಕಲಾವಿದರು ರೂಪಿಸಿದ ವಿಶೇಷ ರಂಗಪ್ರಯೋಗ ‘ಟಿಪ್ಪು ನಿಜಕನಸುಗಳು’ ನಾಟಕ ಡಿ.28 ಮತ್ತು 29ರಂದು ನಗರದ ತರಾಸು ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.
ಮೂರುವರೆ ಗಂಟೆಯ ಈ ಪ್ರದರ್ಶನ ಸಂಜೆ 6ಕ್ಕೆ ಆರಂಭವಾಗಲಿದೆ. ಮಧ್ಯೆ ಹತ್ತು ನಿಮಿಷ ವಿರಾಮ ಇರಲಿದೆ. ₹ 100 ಟಿಕೆಟ್ ನಿಗದಿಪಡಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಹಾಗೂ www.rangayana.org ಜಾಲತಾಣದಲ್ಲಿ ಟಿಕೆಟ್ ಲಭ್ಯ ಇವೆ ಎಂದು ನಾಟಕವನ್ನು ರಚಿಸಿ ನಿರ್ದೇಶಿಸಿದ ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಸುದ್ದಿಗಾರರಿಗೆ ಸೋಮವಾರ ಮಾಹಿತಿ ನೀಡಿದರು.
‘ಈ ವಿಶೇಷ ರಂಗಪ್ರಯೋಗ ರಾಜ್ಯದ ಎಲ್ಲೆಡೆ ಪ್ರದರ್ಶನಗೊಳ್ಳಬೇಕು ಎಂಬ ಯೋಜನೆಯನ್ನು ರಂಗಾಯಣ ರೂಪಿಸಿದೆ. ರಂಗಪಯಣದ ಮೊದಲ ಹೆಜ್ಜೆ ಬೆಂಗಳೂರಿನಿಂದ ಆರಂಭಗೊಂಡಿದೆ. ಡಿ.27ರಂದು ದಾವಣಗೆರೆ, ಡಿ.31, ಜ.1ರಂದು ಶಿವಮೊಗ್ಗ, ದಕ್ಷಿಣ ಕನ್ನಡ, ಮಂಡ್ಯ ಸೇರಿ ಹಲವೆಡೆ ಮೊದಲ ಹಂತದಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ. ಟಿಕೆಟ್ ಖರೀದಿಸಿ ನಾಟಕ ವೀಕ್ಷಿಸಿ’ ಎಂದು ಮನವಿ ಮಾಡಿದರು.
‘
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…