ಮಂಡ್ಯ: ಕಬ್ಬು ಹಾಗೂ ಹಾಲಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಹಲವು ದಿನಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಇಂದು ತೀವ್ರಗೊಳಿಸಲು ರೈತ ಸಂಘಟನೆಗಳು ಉದ್ದೇಶಿಸಿ, ಮಂಡ್ಯ ಬಂದ್ಗೆ ಕರೆ ನೀಡಿವೆ.
ಬಂದ್ ಗೆ ವರ್ತಕರಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ನಗರದ ಪೇಟೆ ಬೀದಿ, ವಿವಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಅಂಗಡಿಗಳು ಬಾಗಿಲು ಮುಚ್ಚಿವೆ.ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.
ಕಳೆದ 40 ದಿನಗಳಿಂದ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಹಲವಾರು ರಾಜಕೀಯ ನಾಯಕರು ಭೇಟಿ ನೀಡಿ ಬೇಡಿಕೆ ಈಡೇರಿಸುತ್ತೇವೆ ಎಂದು ಆಶ್ವಾಸನೆ ನೀಡಿದ್ದರೂ, ಪ್ರತಿಭಟನೆ ಕೈ ಬಿಟ್ಟಿರಲಿಲ್ಲ. ಆದರೆ ಸರ್ಕಾರದ ಕಡೆಯಿಂದ ಸರಿಯಾದ ಸ್ಪಂದನೆ ಸಿಗದಿದ್ದರಿಂದ ರೈತ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ಇಂದು ಮಂಡ್ಯ ಬಂದ್ಗೆ ಕರೆ ನೀಡಿದರು.