ಮಂಡ್ಯ: ಕಬ್ಬು ಹಾಗೂ ಹಾಲಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಹಲವು ದಿನಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಇಂದು ತೀವ್ರಗೊಳಿಸಲು ರೈತ ಸಂಘಟನೆಗಳು ಉದ್ದೇಶಿಸಿ, ಮಂಡ್ಯ ಬಂದ್ಗೆ ಕರೆ ನೀಡಿವೆ.
ಬಂದ್ ಗೆ ವರ್ತಕರಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ನಗರದ ಪೇಟೆ ಬೀದಿ, ವಿವಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಅಂಗಡಿಗಳು ಬಾಗಿಲು ಮುಚ್ಚಿವೆ.ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.
ಕಳೆದ 40 ದಿನಗಳಿಂದ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಹಲವಾರು ರಾಜಕೀಯ ನಾಯಕರು ಭೇಟಿ ನೀಡಿ ಬೇಡಿಕೆ ಈಡೇರಿಸುತ್ತೇವೆ ಎಂದು ಆಶ್ವಾಸನೆ ನೀಡಿದ್ದರೂ, ಪ್ರತಿಭಟನೆ ಕೈ ಬಿಟ್ಟಿರಲಿಲ್ಲ. ಆದರೆ ಸರ್ಕಾರದ ಕಡೆಯಿಂದ ಸರಿಯಾದ ಸ್ಪಂದನೆ ಸಿಗದಿದ್ದರಿಂದ ರೈತ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ಇಂದು ಮಂಡ್ಯ ಬಂದ್ಗೆ ಕರೆ ನೀಡಿದರು.
ಬೆಂಗಳೂರು: ನಾಳೆ ಮಾಜಿ ಶಾಸಕರು, ಮಾಜಿ ಸಂಸದರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಭೋಜನಕೂಟ ಏರ್ಪಡಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…
ಬೆಂಗಳೂರು: ಆರು ಮಂದಿ ನಕ್ಸಲರ ಶರಣಾಗತಿಯಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನೆಯಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸಂತಸ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗಾಂಧಿವಾದದಿಂದ ಮಾವೋವಾದಕ್ಕೆ ಹೊರಳಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಸರ್ಕಾರದ ನಕ್ಸಲ್ ಪ್ಯಾಕೇಜ್…
ಮೈಸೂರು: ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಟ್ರೈನಿ ಉದ್ಯೋಗಿಗಳಿಗೆ ಜನವರಿ.26ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಕ್ಯಾಂಪಸ್ ಒಳಗೆ ಅಳವಡಿಸಲಾದ…
ತಿರುವನಂತಪುರಂ: ಒಲವಿನ ಉಡುಗೊರೆ ಕೊಡಲೇನು ಸೇರಿದಂತೆ ಹಲವು ಜನಪ್ರಿಯ ಚಿತ್ರಗೀತೆಗಳನ್ನು ಹಾಡಿದ್ದ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ನಿಧನರಾಗಿದ್ದಾರೆ. ಅವರಿಗೆ 80…
ದಾವಣಗೆರೆ: ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ, ಏಪ್ರಿಲ್‌ನಲ್ಲಿ ಸರ್ಕಾರ ಬೀಳೋದು ಅಷ್ಟೇ ಸತ್ಯ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ…