ಚಾಮರಾಜನಗರ :ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ ಮತ್ತು ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಸೆ.4 ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವ್ಯಾಪ್ತಿಯ ಚಾಮ ರಾಜನಗರ ಟೌನ್-1, ಕೋಡಿಮೋಳೆ, ರಾಮಸಮುದ್ರ, ಮಾದಾಪುರ, ಕಾಗಲ ವಾಡಿ, ಸೋಮವಾರಪೇಟೆ ಟೌನ್-2, ಹರದನಹಳ್ಳಿ, ಬೇಡರಪುರ, ಟಿ.ಕೆ ಮೋಳೆ, ಶಿವಪುರ, ಗೂಳಿಪುರ ಎನ್.ಜೆ.ವೈ. ಚಂದಕವಾಡಿ ವ್ಯಾಪ್ತಿಯ ಹಿರಿಕೆರೆ, ಕಾಳಿಕಾಂಬ ಕಾಲೋನಿ, ಚಂದಕವಾಡಿ, ರೇಚಂಬಳ್ಳಿ, ಮಲ್ಲೇದೇವನಹಳ್ಳಿ, ನವೋದಯ, ಹೊಂಡರಬಾಳು, ಜ್ಯೋತಿಗೌಡನಪುರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ. ಸಂ 1912 ಸಂಪರ್ಕಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.