ಮೈಸೂರು: ಕರ್ನಾಟಕ ಬುದ್ಧಧಮ್ಮ ಸಮಿತಿ ವತಿಯಿಂದ ಡಿ.೬ರಂದು ಸಂಜೆ ೬ ಗಂಟೆಗೆ ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧ ವಿಹಾರದಲ್ಲಿ ಬೋಧಿಸತ್ವ ಬಾಬಾಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿಬ್ಬಾಣ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀಲಂಕಾದ ಬೌದ್ಧಭಿಕ್ಕು ಬುದ್ಧತಿಸ್ಸಾ ಅವರು ಕಾರ್ಯಕ್ರಮದ ಸಮ್ಮುಖ ವಹಿಸುವರು. ಮುಖ್ಯ ಅತಿಥಿಗಳಾಗಿ ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಪಾಲಿಕೆ ಸದಸ್ಯ ಎಂ.ಯು.ಸುಬ್ಬಯ್ಯ ಭಾಗವಹಿಸುವರು. ಸಮಿತಿಯ ಅಧ್ಯಕ್ಷರಾದ ಪ್ರೊ.ಡಿ.ನಂಜುಂಡಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಪ್ರಧಾನ ಕಾರ್ಯದರ್ಶಿ ಆರ್.ಮಹಾದೇವಪ್ಪ ಪ್ರಾಸ್ತಾವಿಕ ನುಡಿಗಳನ್ನಾಡುವರು. ಖ್ಯಾತ ಗಾಯಕ ಅಮ್ಮ ರಾಮಚಂದ್ರ ತಂಡದಿಂದ ಗೀತಾಗಾಯನ ನಡೆಯಲಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್.ಮಹಾದೇವಪ್ಪ ತಿಳಿಸಿದ್ದಾರೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…