ಜಿ.ಬಿ.ಸರಗೂರು: ಇಲ್ಲಿನ ಜೈ ಭುವನೇಶ್ವರಿ ಯುವಕರ ಸಂಘದ ವತಿಯಿಂದ ನ.೨೭ರ ಭಾನುವಾರದಂದು ೬೭ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ.
ಮುಖ್ಯ ಅತಿಥಿಗಳಾಗಿ ಎಚ್.ಡಿ.ಕೋಟೆ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು, ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ, ಮಾಜಿ ಶಾಸಕರಾದ ಬೀಚನಹಳ್ಳಿ ಚಿಕ್ಕಣ್ಣ, ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಜಿ.ಡಿ. ಹರೀಶ್ ಗೌಡ, ಜಾ.ದಳ ಮುಖಂಡರಾದ ಕೆ.ಎಂ. ಕೃಷ್ಣನಾಯಕ, ಜಯಪ್ರಕಾಶ್ ಚಿಕ್ಕಣ್ಣ, ಬಿಜೆಪಿ ಮುಖಂಡರಾದ ಅಪ್ಪಣ್ಣ, ಎಚ್.ಪಿ. ಕೃಷ್ಣಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ. ಸಂಜೆ ೬.೩೦ಕ್ಕೆ ಗ್ರಾಮದ ಅರಳಿಕಟ್ಟೆ ಆವರಣದಲ್ಲಿ ಪ್ರಕೃತಿ ಮ್ಯೂಸಿಕಲ್ ಇವೆಂಟ್ಸ್ ವತಿಯಿಂದ ‘ಅಪ್ಪು ನೆನಪುಗಳು’ ಎಂಬ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.
ಕೆಂಪೇಗೌಡ ಗಾರೆ ಕೆಲಸಗಾರರ ಯುವಕರ ಸಂಘ, ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ, ಕಾಶಿ ವಿಶ್ವನಾಥ ಟ್ರಸ್ಟ್ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…