ಚಾಮರಾಜನಗರ: ಬಿಜೆಪಿ ಯುವ ನಾಯಕ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಶಾಸಕ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರ ಜನ್ಮದಿನದ ಅಂಗವಾಗಿ ನ.೫ ರಂದು ನಗರದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಕನಕಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ್ ಹೇಳಿದರು.
ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ಸಿದ್ದಮಲ್ಲೇಶ್ವರ ವಿರಕ್ತ ಮಠದ ಬಸವರಾಜಸ್ವಾಮಿ ಅನುಭವ ಮಂಟಪದಲ್ಲಿ ಅಂದು ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಶಿಬಿರದಲ್ಲಿ ಕಣ್ಣಿನ ತಪಾಸಣೆ ಮತ್ತು ಕನ್ನಡಕ ವಿತರಣೆ, ಬಿ.ಪಿ ಮತ್ತು ಶುಗರ್ ಪರೀಕ್ಷೆ ಮತ್ತು ಸಲಹೆ, ಶ್ವಾಸಕೋಶ ಪರೀಕ್ಷೆ, ಮಹಿಳೆಯರ ಗರ್ಭಕೋಶದ ಪರೀಕ್ಷೆ, ವಾಕ್ ಮತ್ತು ಶ್ರವಣ ತಪಾಸಣೆ, ಕಿವಿ, ಮೂಗು, ಗಂಟಲು ಪರೀಕ್ಷೆ, ಹೃದಯ ರೋಗ ತಪಾಸಣೆ, ಮಹಿಳೆಯರ ಸ್ತನ ಕ್ಯಾನ್ಸರ್ ಪರೀಕ್ಷೆ ಸೇರಿದಂತೆ ಇತರ ಆರೋಗ್ಯಗಳ ತಪಾಸಣೆ ಮಾಡಲಾಗುತ್ತದೆ. ಜಿಲ್ಲೆಯ ಜನತೆ ಶಿಬಿರದ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
ಗೋಷ್ಠಿಯಲ್ಲಿ ಜ್ಯೋತಿ, ಬಸವಣ್ಣ, ಮಲ್ಲೇಶ್, ನಂದೀಶ್, ಚಿಕ್ಕಸ್ವಾಮಿ, ಶಿವರುದ್ರಸ್ವಾಮಿ ಹಾಜರಿದ್ದರು.ನಾಳೆ ಆರೋಗ್ಯ ಉಚಿತ ತಪಾಸಣಾ ಶಿಬಿರ
ಚಾಮರಾಜನಗರ: ಬಿಜೆಪಿ ಯುವ ನಾಯಕ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಶಾಸಕ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರ ಜನ್ಮದಿನದ ಅಂಗವಾಗಿ ನ.೫ ರಂದು ನಗರದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಕನಕಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ್ ಹೇಳಿದರು.
ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ಸಿದ್ದಮಲ್ಲೇಶ್ವರ ವಿರಕ್ತ ಮಠದ ಬಸವರಾಜಸ್ವಾಮಿ ಅನುಭವ ಮಂಟಪದಲ್ಲಿ ಅಂದು ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಶಿಬಿರದಲ್ಲಿ ಕಣ್ಣಿನ ತಪಾಸಣೆ ಮತ್ತು ಕನ್ನಡಕ ವಿತರಣೆ, ಬಿ.ಪಿ ಮತ್ತು ಶುಗರ್ ಪರೀಕ್ಷೆ ಮತ್ತು ಸಲಹೆ, ಶ್ವಾಸಕೋಶ ಪರೀಕ್ಷೆ, ಮಹಿಳೆಯರ ಗರ್ಭಕೋಶದ ಪರೀಕ್ಷೆ, ವಾಕ್ ಮತ್ತು ಶ್ರವಣ ತಪಾಸಣೆ, ಕಿವಿ, ಮೂಗು, ಗಂಟಲು ಪರೀಕ್ಷೆ, ಹೃದಯ ರೋಗ ತಪಾಸಣೆ, ಮಹಿಳೆಯರ ಸ್ತನ ಕ್ಯಾನ್ಸರ್ ಪರೀಕ್ಷೆ ಸೇರಿದಂತೆ ಇತರ ಆರೋಗ್ಯಗಳ ತಪಾಸಣೆ ಮಾಡಲಾಗುತ್ತದೆ. ಜಿಲ್ಲೆಯ ಜನತೆ ಶಿಬಿರದ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
ಗೋಷ್ಠಿಯಲ್ಲಿ ಜ್ಯೋತಿ, ಬಸವಣ್ಣ, ಮಲ್ಲೇಶ್, ನಂದೀಶ್, ಚಿಕ್ಕಸ್ವಾಮಿ, ಶಿವರುದ್ರಸ್ವಾಮಿ ಹಾಜರಿದ್ದರು.