ಗುಂಡ್ಲುಪೇಟೆ: ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ಅ.೧೩ರಂದು ನಡೆಯುವ ಕುಂಭಮೇಳದ ಹಿನ್ನೆಲೆಯಲ್ಲಿ ಮಲೆಮಹದೇಶ್ವರ ಬೆಟ್ಟದಿಂದ ಮಹದೇಶ್ವರ ಜ್ಯೋತಿಯು ಅ. ೮ ರಂದು ಪಟ್ಟಣಕ್ಕೆ ಆಗಮಿಸಲಿದೆ. ಅಂದು ಮಧ್ಯಾಹ್ನ ೧೨ರಿಂದ ೧ ಗಂಟೆಯವರೆಗೆ ತೆರಕಣಾಂಬಿ ಹುಂಡಿ ಪ್ರವೇಶಿಸಲಿದೆ.
ತಾಲ್ಲೂಕು ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಹಂಗಳ ನಂಜಪ್ಪ, ಜಿಲ್ಲಾ ನಿರ್ದೇಶಕ ಕುರುಬರಹುಂಡಿ ಲೋಕೇಶ್, ವೀರಶೈವ ಲಿಂಗಾಯತ ಮಹಾಸಭೆ ರಾಜ್ಯ ಸಮಿತಿ ಸದಸ್ಯ ಸುಜೇಂದ್ರ ಮುಖಂಡರು ಜ್ಯೋತಿಯನ್ನು ಸ್ವಾಗತಿಸಲಿದ್ದಾರೆ. ನಂತರ ಕಗ್ಗಳ, ಶಿಂಡನಪುರ ಹಾಗೂ ಬೇಗೂರು ಮಾರ್ಗವಾಗಿ ಹಿರೀಕಾಟಿ ತಲುಪಲಿದೆ. ಅಲ್ಲಿಂದ ನಂಜನಗೂಡಿಗೆ ಹೊರಡಲಿದೆ ಎಂದು ತಾಲ್ಲೂಕು ವೀರಶೈವ ಮಹಾಸಭೆ ಅಧ್ಯಕ್ಷ ಹಂಗಳ ನಂಜಪ್ಪ ತಿಳಿಸಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…