ಚಾಮರಾಜನಗರ: ಉಳುಮೆ ಮಾಡುತ್ತಿದ್ದಾಗ ಟ್ರಾಕ್ಟರ್ ಮುಗುಚಿಕೊಂಡು ವ್ಯಕ್ತಿಯೋರ್ವ ಮೃತಪಟ್ಟಿರುವ ಧಾರುಣ ಘಟನೆ ಮಂಗಳವಾರ ನಡೆದಿದೆ.

ತಾಲೂಕಿನ ಕೊತ್ತಲವಾಡಿ ಗ್ರಾಮದ ಶಿವಕುಮಾರ್ (೩೦) ಮೃತಪಟ್ಟ ದುರ್ದೈವಿ. ತಮ್ಮ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ತಕ್ಷಣವೇ ಚಿಕಿತ್ಸೆಗಾಗಿ ತೆರಕಣಾಂಬಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬರುತ್ತಿದ್ದ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.
ತಮ್ಮ ಜಮೀನಿನಲ್ಲಿ ಉಳುಮೆ ಮಾಡುವಾಗ ಹೊಲದ ಏರಿಯಿಂದ ಮತ್ತೊಂದು ಜಮೀನಿಗೆ ಎರಡು ಪಲ್ಟಿ ಹೊಡೆದಿದೆ ಎನ್ನಲಾಗುತ್ತಿದೆ. ತಕ್ಷಣವೇ ಗಾಯಾಳುವನ್ನು ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮಾರ್ಗಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ.
ಮೃತ ಶಿವಕುಮಾರ್ ಗೆ ಆರು ತಿಂಗಳ ಮಗುವೊಂದು ಇದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟುವಂತಿತ್ತು. ಈ ಘಟನೆ ಕುರಿತು ಯಾವುದೇ ಪ್ರಕರಣಗಳು ದಾಖಲಾಗಿಲ್ಲ.




