ಮಂಡ್ಯ : ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ಗುಂಡಾಪುರದ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಾಲೂಕಿನ ಅಂಕನಹಳ್ಳಿ ಗ್ರಾಮದ ಹನುಮೇಗೌಡ ಅವರ ಪುತ್ರ ನಾಗೇಂದ್ರ (27 ವರ್ಷ) ಎಂಬುವವರೇ ಮೃತಪಟ್ಟವರು. ಇವರು ಬೆಂಗಳೂರಿನ ಪ್ರೆಸ್ಟೀಜ್ ಗ್ರೂಪ್ ಕಂಪನಿಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಅಪಘಾತದ ಕುರಿತು ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು ಮೃತ ಯುವಕನ ಶವವನ್ನು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.





