Mysore
22
scattered clouds

Social Media

ಸೋಮವಾರ, 06 ಏಪ್ರಿಲ 2026
Light
Dark

ಸಂಚಾರ ನಿಯಮ ಉಲ್ಲಂಘನೆ; 1.39 ಲಕ್ಷ ರೂ. ದಂಡ ಸಂಗ್ರಹ

ಮೈಸೂರು: ನಗರದಲ್ಲಿ ಭಾನುವಾರ ಕಾರ್ಯಾಚರಣೆ ನಡೆಸಿರುವ ಸಂಚಾರ ಮತ್ತು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸರು, ೧,೯೦೧ ವಾಹನಗಳನ್ನು ತಪಾಸಣೆ ಮಾಡಿದ್ದು, ನಿಯಮ ಉಲ್ಲಂಘಿಸಿದ ೨೭೪ ವಾಹನಗಳ ಸವಾರರ ವಿರುದ್ಧ ದೂರು ದಾಖಲಿಸಿ ೧.೩೯ ಲಕ್ಷ ರೂ. ದಂಡ ಸಂಗ್ರಹಿಸಿ, ೧೯ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಸೋಮವಾರ ಸರಸ್ವತಿಪುರಂ ಠಾಣಾ ವ್ಯಾಪ್ತಿಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು, ತ್ರಿಬಲ್ ರೈಡಿಂಗ್, ಹೆಲ್ಮೆಟ್ ರಹಿತ ಚಾಲನೆ, ಸೀಟ್ ಬೆಲ್ಟ್ ರಹಿತ ವಾಹನ ಚಾಲನೆ ಮಾಡುವವರಿಗೆ ದಂಡ ವಿಧಿಸಿದರು. ಕೆಲವು ವಾಹನಗಳನ್ನು ವಶಕ್ಕೆ ಪಡೆಯಲಾಯಿತು. ಸೋಮವಾರ ಬೆಳಿಗ್ಗೆ ಆರಂಭವಾದ ಕಾರ್ಯಾಚರಣೆ ರಾತ್ರಿ ೯ ಗಂಟೆಯವರೆಗೂ ನಡೆಯಿತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!