ಹಲಗೂರು: ಚಲಿಸುತ್ತಿದ್ದ ಬೈಕ್ ಅಯತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ದಡಮಹಳ್ಳಿ ಬಳಿ ಗುರುವಾರ ಸಂಭವಿಸಿದೆ.
ಮದ್ದೂರು ತಾಲ್ಲೂಕಿನ ಲಕ್ಷ್ಮೇಗೌಡನದೊಡ್ಡಿ ಗ್ರಾಮದ ಲೇಟ್ ಪ್ರಕಾಶ್ ಅವರ ಪುತ್ರ ಆಕಾಶ್ ಆಚಾರ್ಯ(೨೦) ಮೃತ ಯುವಕ.
ಬಜಾಜ್ ಪಲ್ಸರ್ ಬೈಕ್‌ನಲ್ಲಿ ಕಾರ್ಯ ನಿಮಿತ್ತ ಪುರದೊಡ್ಡಿಗೆ ಬಂದು ಸ್ವಗ್ರಾಮಕ್ಕೆ ಹಿಂದುರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಜಖಂಗೊಂಡಿದೆ. ತೀವ್ರ ಗಾಯಗೊಂಡ ಬೈಕ್ ಸವಾರ ಆಕಾಶ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.