ಜಿಲ್ಲೆಗಳು

ಗಿರಿಜನ ವ್ಯಕ್ತಿ ಸಾವು ಪ್ರಕರಣ ಸಿಒಡಿಗೆ

ನ್ಯಾಯಾಧೀಶರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ; ಅರಣ್ಯಇಲಾಖೆ ೧೭ ಮಂದಿ ವಿರುದ್ಧ ಪ್ರಕರಣ, ಎಲ್ಲರೂ ನಾಪತ್ತೆ

ಎಚ್.ಡಿ.ಕೋಟೆ: ಅರಣ್ಯಾಧಿಕಾರಿಗಳ ವಶದಲ್ಲಿ ದೌರ್ಜನ್ಯದಿಂದ ಸಾವನ್ನಪ್ಪಿದ ಗಿರಿಜನ ವ್ಯಕ್ತಿ ಕರಿಯಪ್ಪ ಅವರ ಮರಣೋತ್ತರ ಪರೀಕ್ಷೆ ನ್ಯಾಯಾಧೀಶರ ಸಮ್ಮುಖದಲ್ಲಿ ನೆರವೇರಿದ್ದು, ಸಿಒಡಿ ತನಿಖೆಗೆ ಪ್ರಕರಣ ವರ್ಗಾವಣೆಗೊಂಡಿದೆ.

ಗುರುವಾರ ಮಧ್ಯಾಹ್ನ ಪಟ್ಟಣದ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಸುರೇಶ್ ಅವರ ಸಮ್ಮುಖದಲ್ಲಿ ಕರಿಯಪ್ಪ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಿತು. ಬಿಗಿ ಬಂದೋಬಸ್ತ್ ವ್ಯವಸ್ಥೆುಂಲ್ಲಿ ಮೃತದೇಹವನ್ನು ಹೊಸಹಳ್ಳಿ ಹಾಡಿಗೆ ತರುತ್ತಿದ್ದಂತೆ ಗಿರಿಜನರ ರೋಧನ ಮತ್ತು ಆಕ್ರೋಶ ಮುಗಿಲು ಮುಟ್ಟಿತ್ತು. ಕರಿಯಪ್ಪ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಗಿರಿಜನರು ಮತ್ತು ಜನಸಾವಾನ್ಯರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತದೆ ಎಂಬ ಕಾರಣದಿಂದ ಕರಿಯಪ್ಪ ಅವರ ಮೃತದೇಹವನ್ನು ಗುರುವಾರ ರಾತ್ರಿ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯ ವರು ಗ್ರಾಮಸ್ಥರಿಗೆ ಮತ್ತು ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಇಲ್ಲಿಗೆ ಸಮೀಪದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಎನ್.ಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹೊಸಹಳ್ಳಿ ಹಾಡಿಯ ಗಿರಿಜನ ವ್ಯಕ್ತಿ ಕರಿುಂಪ್ಪ ಸ್ಥಿತಿ ಚಿಂತಾಜನಕವಾಗಿದ್ದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಮತ್ತು ನೌಕರರು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ವಾಡಿದ್ದರು. ಆದರೆ, ಅವರು ಮೃತಪಟ್ಟ ಹಿನ್ನೆಲೆಯಲ್ಲಿ ಕರಿುಂಪ್ಪ ಅವರ ಪುತ್ರ ಸತೀಶ್ ಬುಧವಾರ ರಾತ್ರಿ ಗುಂಡ್ರೆ ಅರಣ್ಯ ಅಧಿಕಾರಿ ಅಮೃತೇಶ್, ಡಿಆರ್‌ಎಫ್‌ಒ ಕಾರ್ತಿಕ್  ಯಾದವ್ ಮತ್ತು ಸಿಬ್ಬಂದಿಗಳಾದ ಸುಷ್ಮಾ, ಮಹಾದೇವಿ, ತಂಗಮಣಿ, ಆನಂದ್, ಬಾಹುಬಲಿ, ರಾಮು, ಶೇಖರ್, ಸದಾಶಿವ, ಮಂಜು, ಉಮೇಶ್, ಸಂಜಯ, ರಾಜನಾುಂಕ, ಅಯ್ಯಪ್ಪ, ಸೋಮಶೇಖರ್, ಸಿದ್ದಿಕ್ ಪಾಷ ಸೇರಿದಂತೆ ೧೭ ಜನರು ನಮ್ಮ ಜಮೀನಿನ ಬಳಿ ಬಂದು ಮನೆ ಹತ್ತಿರ ಜಿಂಕೆ ಮಾಂಸದ ವಿಚಾರವಾಗಿ ತಮ್ಮ ತಂದೆಯನ್ನು ಅಕ್ರಮವಾಗಿ ಕರೆದುಕೊಂಡು ಹೋಗಿ ಗುಂಡ್ರೆ ಅರಣ್ಯ ಇಲಾಖೆ ಕಚೇರಿಯಲ್ಲಿ ದೌರ್ಜನ್ಯ ಹಲ್ಲೆ ನಡೆಸಿ ಕೊಲೆ ವಾಡಿದ್ದಾರೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಆನಂದ್ ಮತ್ತು ಸಬ್ ಇನ್ಸ್‌ಪೆಕ್ಟರ್ ಜಯಪ್ರಕಾಶ್ ಅವರಿಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದಾರೆ. ಅಧಿಕಾರಿಗಳು ಮತ್ತು ನೌಕರರ ವಿರುದ್ಧ ಅಕ್ರಮ ಬಂಧನ ಕೊಲೆ ಆರೋಪದಲ್ಲಿ ಪ್ರಕರಣ ದಾಖಲಾಗಿರುವುದರಿಂದ ೧೭ ಮಂದಿ ಆರೋಪಿತರು ಅರಣ್ಯದಿಂದ ನಾಪತ್ತೆಯಾಗಿದ್ದಾರೆ. ಸಮೀಪದ ಅರಣ್ಯ ಇಲಾಖೆುಂಲ್ಲಿ ಕೆಲಸ ನಿರ್ವಹಿಸುತ್ತಿದ್ದರೂ ಈ ಭಾಗದಲ್ಲಿ ಕಾಣಿಸಿಕೊಂಡಿರಲಿಲ್ಲ.

ಪ್ರತಿಭಟನೆ ಕೈಬಿಟ್ಟ ಗಿರಿಜನರು
ಎಚ್.ಡಿ.ಕೋಟೆ ತಾಲ್ಲೂಕಿನ ಎನ್.ಬೇಗೂರು ಅರಣ್ಯ ಇಲಾಖೆ ಕಚೇರಿ ಎದುರು ಕರಿಯಪ್ಪ ಅವರ ಕೊಲೆ ಪ್ರಕರಣವನ್ನು ಖಂಡಿಸಿ ನಡೆಸುತ್ತಿದ್ದ ಪ್ರತಿಭಟನೆುಂನ್ನು ಅರಣ್ಯಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಗಿರಿಜನರು ಕೈಬಿಟ್ಟಿದ್ದಾರೆ. ಇದಕ್ಕೂ ಮುನ್ನ ಪ್ರತಿಭಟನೆಗೆ ಶಾಸಕ ಅನಿಲ್ ಚಿಕ್ಕವಾದು, ಮುಖಂಡರಾದ ಕಾವೇರ, ಶೈಲೇಂದ್ರ, ಪುಟ್ಟಬಸವ, ಜಯಪ್ರಕಾಶ್, ಚಿಕ್ಕಣ್ಣ, ಕಾಳಸ್ವಾಮಿ, ವಡ್ಡರಗುಡಿ ಚಿಕ್ಕಣ್ಣ, ಭಾಸ್ಕರ್, ಸಿದ್ದರಾಜು, ರಾಜಣ್ಣ, ಶೇಖರ್, ಬಸವರಾಜು, ಚಂದ್ರು, ರವಿ, ಕಾಳಸ್ವಾಮಿ, ವಿಜಯ ಕುವಾರ್, ನಟರಾಜ್, ಶಿವರಾಜ್ ಸೇರಿದಂತೆ ಅನೇಕರು ಬೆಂಬಲ ವ್ಯಕ್ತಪಡಿಸಿದ್ದು, ಗಿರಿಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅನೇಕ ಸಭೆ ಮತ್ತು ಚರ್ಚೆಗಳನ್ನು ನಡೆಸಲಾಯಿತು.

 

andolanait

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

2 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

2 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

2 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

2 hours ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

2 hours ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

2 hours ago