Mysore
22
overcast clouds

Social Media

ಶನಿವಾರ, 04 ಜುಲೈ 2026
Light
Dark

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಮೈಸೂರು: ಮಾಧ್ಯಮ ಅಕಾಡೆಮಿ ಮತ್ತು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಪ್ರಶಸ್ತಿ ಪಡೆದ ಮೈಸೂರು ಭಾಗದ ಪತ್ರಕರ್ತರನ್ನು ಮೈಸೂರು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಸನ್ಮಾನಿಸಲಾಯಿತು.

ವಿಭಾಗದ ಮುಖ್ಯಸ್ಥರಾದ ಪ್ರೊ.ಎಂ.ಎಸ್.ಸಪ್ನ ಮಾತನಾಡಿ, ಪ್ರಶಸ್ತಿ ಪುರಸ್ಕೃತರು ಈಗಷ್ಟೇ ಪತ್ರಿಕೋದ್ಯಮ ಕ್ಷೇತ್ರಕ್ಕೆ ಕಾಲಿಡುತ್ತಿರುವ ಕಿರಿಯ ಪತ್ರಕರ್ತರಿಗೆ ಸ್ಫೂರ್ತಿಯಾಗಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ನಾಗೇಶ್ ಪಾಣತ್ತಲೆ, ಕೆ.ಪಿ.ನಾಗರಾಜ್, ಕರ್ನಾಟಕ ರಾಜ್ಯ ಕಾರ್ಪಯನಿರತ ಪತ್ರಕರ್ತರ ಸಂಘದಿಂದ ನೆಟ್ಟಕಲ್ಲಪ್ಪ ಪ್ರಶಸ್ತಿ ಪಡೆದ ಅವಿನಾಶ್ ಜೈನಳ್ಳಿ ಅವರನ್ನು ಸನ್ಮಾನಿಸಲಾಯಿತು. ಪತ್ರಿಕೋದ್ಯಮ ವಿಭಾಗದ ಪ್ರೊ.ಸಿ.ಕೆ.ಪುಟ್ಟಸ್ವಾಮಿ, ಪ್ರೊ.ಮಮತಾ, ಅತಿಥಿ ಉಪನ್ಯಾಸಕರಾದ ಕುಮಾರಸ್ವಾಮಿ, ನವೀನ್ ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!