ಮೈಸೂರು : ದುಷ್ಕರ್ಮಿಗಳಿಂದ ನೆನ್ನೆ ದಿನ ಬರ್ಬರವಾಗಿ ಹತ್ಯದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಸಮಿತಿಯ ಸದಸ್ಯ ಪ್ರವೀಣ್ ನೆಟ್ಟಾರು ಅವರ ಹತ್ಯೆಯನ್ನು ಖಂಡಿಸಿ ಇಂದು ನಗರದ ಬಿಜೆಪಿ ಚಾಮರಾಜ ಕ್ಷೇತ್ರದ ಯುವ ಮೋರ್ಚ ಕಾರ್ಯಕರ್ತರು ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಪ್ರವೀಣ್ ನೆಟ್ಟಾರು ಅವರ ಹತ್ಯೆಗೆ ಕಾರಣರಾದ ದೇಶದ್ರೋಹಿಗಳನ್ನು ಕೂಡಲೇ ಬಂಧಿಸಿ ಎಂದು ಘೋಷಣೆಗಳನ್ನು ಕೂಗುತ್ತಾ ಮೋಂಬತ್ತಿ ಹಿಡಿದು ಶ್ರದ್ಧಾಂಜಲಿ ಸಲ್ಲಿಸಿದರು. ತಪ್ಪಿತಸ್ಥರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಯುವ ಮೋರ್ಚ ರಾಜ್ಯ ಉಪಾಧ್ಯಕ್ಷ ಜಯಶಂಕರ್, ಮೈಸೂರು ನಗರ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಗೌಡ, ಪ್ರಧಾನ ಕಾರ್ಯದರ್ಶಿ ಸಂತೋಷ್, ಭರತ್, ಚಾಮರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಸಚಿನ್, ಕೃಷ್ಣರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಮನುಶೖೆವ, ಚಾಮುಂಡೇಶ್ವರಿ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಮಧು, ಅರ್ಜುನ್, ಪ್ರಜ್ವಲ್, ನರಸಿಂಹಮೂರ್ತಿ, ಬದ್ರಿ ಪ್ರಸಾದ್, ಪಂಕಜ್, ಕೀರ್ತಿರಾಜ್ ಮುಂತಾದವರು ಪಾಲ್ಗೊಂಡಿದ್ದರು.