ಜಿಲ್ಲೆಗಳು

ನೈಋತ್ಯ ರೈಲ್ವೆ ನೌಕರರು ಹಾಗೂ ಸಿಬ್ಬಂದಿಗಳಿಗೆ ಸನ್ಮಾನ

ಮೈಸೂರು : ನಗರದ ಯಾದವಗಿರಿಯ ಚಾಮುಂಡಿ ಆಫೀಸರ್ಸ್ ಕ್ಲಬ್ ನಲ್ಲಿಇಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ಮಹಿಳಾ ಕಲ್ಯಾಣ ಸಮಿತಿ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಪ್ರಶಸ್ತಿ ವಿತರಣಾ  ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ನೈಋತ್ಯ ರೈಲ್ವೆ ಮೈಸೂರು ವಿಭಾಗದ ನೌಕರರ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನ ನೀಡಲು ಹಾಗೂ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಹೆಸರು ಸಂಪಾದಿಸಿದ, ವಿವಿಧ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿ ಭಾಗವಹಿಸಿದ ನೌಕರರನ್ನು ಮತ್ತು ಹಲವಾರು ವಿಭಾಗಗಳಲ್ಲಿ ತಮ್ಮ ಜವಾಬ್ದಾರಿಯುತ ಕಾರ್ಯ ಹಾಗು ಕ್ಷಮತೆಯಿಂದ ವಿಭಾಗದ ಘನತೆಯನ್ನು ಎತ್ತಿ ಹಿಡಿದ ಇತರೆ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.


ಕಾರ್ಯಕ್ರಮದ ಮುಖ್ಯಅತಿಥಿಗಳಾಗಿ ನೈಋತ್ಯ ರೈಲ್ವೆ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ  ರಾಹುಲ್ ಅಗರ್ವಾಲ್ ರವರು ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಮಿತಿಯ ಕಾರ್ಯಕ್ರಮಗಳನ್ನು ಶ್ಲಾಘಿಸಿ, ವಿಭಾಗದ ರೈಲ್ವೆ ನೌಕರರ ಕರ್ತವ್ಯ ಮತ್ತು ಅವರ ನಿಷ್ಠೆಯನ್ನು ಹೊಗಳಿದರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಸಾಧನೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಕ್ರೀಡಾಪಟುಗಳು ಮಾಡಿರುವ ಸಾಧನೆಗಳನ್ನು ಶ್ಲಾಘಿಸಿ ತಮ್ಮ ತಮ್ಮ ವೃತ್ತಿಯಲ್ಲಿನ ಮಹಾತ್ವಾಕಾಂಕ್ಷೆಯನ್ನು ತಲುಪಲು ಹಚ್ಚಿನ ಶ್ರಮವಹಿಸುವಂತೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ  ರಾಹುಲ್ ಅಗರ್ವಾಲ್ ರವರು ಮತ್ತು ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಮಿತಿಯ ಅಧ್ಯಕ್ಷರಾದ  ಪೂಜಾ ಅಗರ್ವಾಲ್ ರವರು 2020-21 ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಮತ್ತು ದ್ವಿತೀಯ ಪಿ ಯು ಸಿ ಯಲ್ಲಿ ಶೇಕಡ 85 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ನೈಋತ್ಯ ರೈಲ್ವೆ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ರೈಲ್ವೆ ನೌಕರರ 35 ಪ್ರತಿಭಾವಂತ ಮಕ್ಕಳಿಗೆ ವಿಧ್ಯಾರ್ಥಿ ವೇತನ ಪತ್ರ ಮತ್ತು ನಗದು ಬಹುಮಾನಗಳ ಜೊತೆಗೆ ಪ್ರತಿಭಾ ಪುರಸ್ಕಾರಗಳನ್ನು ನೀಡಿ ಸನ್ಮಾನಿಸಿದರು.

ಅಂತರಾಷ್ಟ್ರೀಯ ಬಾಸ್ಕೆಟ್ ಬಾಲ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ರಾಷ್ಟ್ರೀಯ ತಂಡದ ನಾಯಕರಾದ  ಬಾಂಧವ್ಯ ಮತ್ತು ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡದ ನವನೀತ ಹಾಗು ಇಲಾಖೆಯ ವಿವಿಧ ವಿಭಾಗಗಳಲ್ಲಿ ತಮ್ಮ ಕರ್ತವ್ಯಗಳನ್ನು ಹೆಚ್ಚಿನ ಕ್ಷಮತೆಯೊಂದಿಗೆ ನಡೆಸಿ ವಿಭಾಗದ ಕೀರ್ತಿಯನ್ನು ಹೆಚ್ಚಿಸಿದ ಇತರೆ 40 ರೈಲ್ವೆ ನೌಕರರನ್ನು ಸನ್ಮಾನಿಸಲಾಯಿತು.

ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪೂಜಾ ಅಗರ್ವಾಲ್ ರವರು ಸಹ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಮಿತಿಯು ಪ್ರತಿಬಾರಿಯೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಮುಂಚೂಣಿಯಲ್ಲಿದ್ದೂ, ಆರೋಗ್ಯಕರ ಮತ್ತು ಸ್ಪರ್ಧಾತ್ಮಕ ವಾತಾವರಣ ನಿರ್ಮಿಸಿ, ಶೈಕ್ಷಣಿಕವಾಗಿ, ಕ್ರೀಡಾ ಕ್ಷೇತ್ರದಲ್ಲಿ ಹಾಗೂ ಇತರ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಬೆಳವಣಿಗೆ ಕಾಣಲು ಸಹಾಯ ಮಾಡುತ್ತಿದೆ ಎಂದು ಹೇಳಿದರು ಮತ್ತು ಸಿಬ್ಬಂದಿವರ್ಗದ ಮಕ್ಕಳು ತೋರಿಸುತ್ತಿರುವ ಪ್ರತಿಭೆಗೆ ಅತ್ತೀವ ಹರ್ಷ ವ್ಯಕ್ತ ಪಡಿಸಿದರು. ಹಾಗು ಪುರಸ್ಕಾರ ಪಡೆಯದ ಇತರೆ ಮಕ್ಕಳು ಇದೇ ಎಲ್ಲದಕ್ಕೂ ಕೊನೆಯೆಂದು ವಿಶ್ವಾಸ ಕಳೆದುಕೊಳ್ಳದೆ ತಮ್ಮ ಕ್ಷಮತೆಯನ್ನು ತೋರಿಸಲು ಮುಂದೆ ಸಿಗುವ ಮತ್ತಷ್ಟು ಅವಕಾಶಗಳನ್ನು ಬಳಸಿಕೊಳ್ಳಬೇಕೆಂದು ಒತ್ತಾಯಿಸಿದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

11 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

38 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago