ಮೈಸೂರು: ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಆರಂಭಿಸಿರುವ ನಗರ ಸಂಚಾರ ಪೊಲೀಸರು ಒಂದು ವಾರದಲ್ಲಿ ೫೩೭ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಮೈಸೂರು ನಗರ ಸಂಚಾರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ದ ಕ್ರಮ ಕೈಗೊಳ್ಳುತ್ತಿದ್ದು, ನ.೨೦ರಿಂದ ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡಿದ್ದರು. ಈ ವಿಶೇಷ ಕಾರ್ಯಾಚರಣೆಯಲ್ಲಿ ತ್ರಿಬಲ್ ರೈಡಿಂಗ್‌ನಿಂದ ಆಗಬಹುದಾದಂತಹ ರಸ್ತೆ ಅಪಘಾತಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಜತೆಗೆ ಈವರೆಗೆ ಒಟ್ಟು ೫೩೭ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಮೈಸೂರು ನಗರ ಸಂಚಾರ ಪೊಲೀಸರಿಂದ ತ್ರಿಬಲ್ ರೈಡಿಂಗ್ ವಿರುದ್ಧ ಈ ವಿಶೇಷ ಕಾರ್ಯಾಚರಣೆಯು ಮುಂದುವರಿಯುವುದಲ್ಲದೇ, ಇತರೆ ಸಂಚಾರ ನಿಯಮಗಳ ಉಲ್ಲಂಘನೆಗಳ ವಿರುದ್ದವೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಸಂಬಂಧಪಟ್ಟ ಅವಶ್ಯ ದಾಖಲಾತಿಗಳನ್ನು ತಮ್ಮೊಂದಿಗೆ ಇಟ್ಟುಕೊಳ್ಳುವಂತೆ ಸಾರ್ವಜನಿಕರಿಗೆ ಮೈಸೂರು ನಗರ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.