ಜಿಲ್ಲೆಗಳು

ಚಿರತೆ ದಾಳಿಗೆ ಎರಡು ಇಲಾಚಿ ಕರು ಬಲಿ !

ಹನೂರು: ತಾಲೂಕಿನ ಒಡೆಯರ ಪಾಳ್ಯ ಸಮೀಪದ ವಿ ಎಸ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಸಿದ್ದಾಚಾರಿ ಎಂಬುವರಿಗೆ ಸೇರಿದ ಎರಡು ಇಲಾಚಿ ಕರುಗಳ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಕರುಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಕಳೆದ ಎರಡು ದಿನಗಳಿಂದ ಸಿದ್ದಾಚಾರಿ ಎಂಬುವರಿಗೆ ಸೇರಿದ ಜಮೀನಿನ ಕೊಟ್ಟಿಗೆಯಲ್ಲಿ ಕಟ್ಟು ಹಾಕಲಾಗಿದ್ದ ಐದು ಇಲಾಚಿ ಕರುಗಳ ಪೈಕಿ ಕಳೆದ ಎರಡು ದಿನಗಳಿಂದ ಪ್ರತಿ ದಿನಕ್ಕೊಂದು ಕರುವನ್ನು ತಿಂದು ಹಾಕಿದೆ.

ಮೊದಲನೆಯ ದಿನ ಚಿರತೆ ಕರುವನ್ನು ಎಳೆದೊಯ್ದು ಅರ್ಧ ತಿಂದಿತ್ತು. ಈ ವೇಳೆ ರೈತ ಸಿದ್ದಾಚಾರಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ, ಮತ್ತೆ ಇನ್ನೆರಡು ದಿನ ಚಿರತೆ ಬರುವುದಿಲ್ಲ ಎಂದು ತಿಳಿಸಿದ್ದರು.

ಆದರೆ ಮರುದಿನವೇ ಇನ್ನೊಂದು ಇಲಾಚಿ ಕರುವನ್ನು ಎಳೆದೊಯ್ದಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಕರುಗಳ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ತಿಳಿಯುತ್ತಿದ್ದಂತೆ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಹರೀಶ್ ಸಿದ್ದಾಚಾರಿ ಜಮೀನಿಗೆ ಸಿಸಿ ಕ್ಯಾಮೆರಾ ವನ್ನು ಸಂಜೆ 6 ಗಂಟೆಯ ವೇಳೆಗೆ ಅಳವಡಿಸಿದ್ದಾರೆ.

ಕ್ಯಾಮರ ಅಳವಡಿಸಿದ 40 ನಿಮಿಷದಲ್ಲಿಯೇ ಚಿರತೆ ಮತ್ತೊಮ್ಮೆ ಕೊಟ್ಟಿಗೆಯ ಬಳಿ ಬಂದಿರುವುದು ಸೆರೆಯಾಗಿದೆ. ಇನ್ನಾದರೂ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಮೃತಪಟ್ಟಿರುವ ಎರಡು ಇಲಾಚಿ ಕರುಗಳಿಗೆ ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಲಾಗಿದೆ.

ಕಳೆದ ನಾಲ್ಕು ದಿನಗಳಿಂದ ಸತತವಾಗಿ ಚಿರತೆ ದಾಳಿ ನಡೆಸಿ ಮೇಕೆ ನಾಯಿ ಕರುಗಳನ್ನು ತಿಂದು ಹಾಕಿದೆ. ತೋಟದ ಮನೆಯಲ್ಲಿ ಇರುವ ವಯೋವೃದ್ಧರು ಹಾಗೂ ಚಿಕ್ಕ ಮಕ್ಕಳುಗಳನ್ನು ಪೋಷಕರು ಸಂಜೆಯ ನಂತರ ತಿರುಗಾಡಲು ಬಿಡಬಾರದು. ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇಟ್ಟು ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸಿ ಶೀಘ್ರವೇ ಚಿರತೆ ಸೆರೆ ಹಿಡಿಯಬೇಕು ಎಂದು ಪರಿವರ್ತನಾ ಅರಣ್ಯ ಸಮಿತಿ ಅಧ್ಯಕ್ಷರು ಎನ್ ಕೃಷ್ಣಮೂರ್ತಿ  ಆಗ್ರಹಿಸಿದ್ದಾರೆ.

andolanait

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

1 hour ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

1 hour ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

1 hour ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

2 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

2 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

2 hours ago