ಜಿಲ್ಲೆಗಳು

ಲಾರಿ-ಕಾರು ಡಿಕ್ಕಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

ಮಂಡ್ಯ: ಮದ್ದೂರು ತಾಲೂಕು ಗೆಜ್ಜಲಗೆರೆ ಸಮೀಪ ಸೋಮವಾರ ನಸುಕಿನ ಜಾವ ಲಾರಿ ಮತ್ತು ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.

ಕಾರು ಚಾಲಕ ಶಾಕಿಬ್ (25), ಸದ್ದಾಂ ಷರೀಫ್(23) ಮೃತರು. ನಸೀರಾ(24), ನಿಖತ್(20), ಜಹೀಬ್(36) ಗಾಯಗೊಂಡಿದ್ದು, ಮಂಡ್ಯದ ಮಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಸಂಬಂಧಿಕರ ಬೀಗರ ಔತಣ ಕೂಟಕ್ಕೆಂದು ಬೆಂಗಳೂರಿಗೆ ಹೋಗಿ ಕಾರಿನಲ್ಲಿ ವಾಪಸ್ ಮಂಡ್ಯಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಇವರು ಪ್ರಯಾಣಿಸುತ್ತಿದ್ದ ಕಾರು 3:30ರ ಸಮಯದಲ್ಲಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ತೀವ್ರ ಗಾಯಗೊಂಡ ಇಬ್ಬರೂ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತ ಸದ್ದಾಂ ಅವರು ಮಂಡ್ಯ ನಗರದ ಗುತ್ತಲು ಬಡಾವಣೆಯ ವಿಜಯ ಕರ್ನಾಟಕ ಪತ್ರಿಕೆ ವಿತರಕ ಕಲೀಂ ಷರೀಫ್ ಅವರ ಪುತ್ರ. ಕಲೀಂ‌ ಷರೀಫ್ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆಯಾಗಿದ್ದರಿಂದ ಸದ್ದಾಂ ಅವರೇ ಮನೆಮನೆಗೆ ಪತ್ರಿಕೆಗಳ ವಿತರಣೆ ನೋಡಿಕೊಳ್ಳುತ್ತಿದ್ದರು. ಪತ್ರಿಕೆಗಳನ್ನು ವಿತರಣೆ ಮಾಡುವ ಸಲುವಾಗಿಯೇ ಮಧ್ಯರಾತ್ರಿ ಬೆಂಗಳೂರಿನಿಂದ ಮಂಡ್ಯಗೆ ಹೊರಟಿದ್ದರು. ಅಪಘಾತದಲ್ಲಿ ಮಗ ಸತ್ತಿರುವ ಸುದ್ದಿ ತಿಳಿದ ಬಳಿಕವೂ ಕಲೀಂ‌ ಷರೀಫ್ ಅವರು ಖುದ್ದು ತಾವೇ ಹೋಗಿ 600ಕ್ಕೂ ಹೆಚ್ಚು ಪತ್ರಿಕೆಗಳನ್ನು ವಿತರಣೆ ಮಾಡಿ, ವೃತ್ತಪರತೆ ಪ್ರದರ್ಶಿದ್ದಾರೆ. ಘಟನೆ ಸಂಬಂಧ ಮದ್ದೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

andolanait

Recent Posts

ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ ಬಳಿ ನಡೆದಿದೆ. ರಶ್ಮಿ…

6 mins ago

ಫೋನ್‌ ಕದ್ದಾಲಿಕೆ ಅವಶ್ಯಕತೆ ಏನಿದೆ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

ರಾಮನಗರ: ಕಾಂಗ್ರೆಸ್‌ ಸರ್ಕಾರದಲ್ಲಿ ಫೋನ್‌ ಕದ್ದಾಲಿಕೆ ಇದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

16 mins ago

ಗಂಗಾ ಕಲ್ಯಾಣ ಪೋರ್ಟಲ್‌ನಲ್ಲೇ ವಿದ್ಯುತ್‌ ಮೂಲಸೌಕರ್ಯದ ಸ್ಥಿತಿಗತಿ ಮಾಹಿತಿ: ಇಂಧನ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ…

44 mins ago

ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ: ಇಸ್ರೇಲ್‌ ಎಚ್ಚರಿಕೆ

ಇಸ್ರೇಲ್:‌ ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ ಎಂದು ಇಸ್ರೇಲ್‌ ಖಡಕ್‌ ಎಚ್ಚರಿಕೆ ಕೊಟ್ಟಿದೆ. ಇರಾನ್‌ನ ಮುಂದಿನ ನಾಯಕನ…

52 mins ago

ಹಾಸನ: ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತದಿಂದ ಸಾವು

ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.…

1 hour ago

90 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ

ಮೈಸೂರು: 90 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಉರಗ ಸಂರಕ್ಷಕ ಕೆಂಪರಾಜು ಯಶಸ್ವಿಯಾಗಿದ್ದಾರೆ. ಮೈಸೂರಿನ ಇಲವಾಲ ಗ್ರಾಮದಲ್ಲಿ…

1 hour ago