ಮೈಸೂರು : ನಗರದ ಹೆಸರಾಂತ ʼನಟನ ರಂಗಶಾಲೆʼಯಲ್ಲಿ ಈ ಬಾರಿಯ ವಾರಾಂತ್ಯ ನಾಟಕಕ್ಕೆ ಎರಡು ವಿಶೇಷವಾದ ನಾಟಕಗಳನ್ನು ಪ್ರಸ್ತುತ ಪಡಿಸಲು ಸಿದ್ಧವಾಗಿದೆ. ಈ ಬಗ್ಗೆ ಚಿತ್ರನ ನಟ ಹಾಗೂ ʼನಟನ ರಂಗಶಾಲೆʼಯ ಸಂಸ್ಥಾಪಕರಾದ ಮಂಡ್ಯ ರಮೇಶ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕಾರ್ಯಕ್ರಮದ ಬಗ್ಗೆ ತಿಳಿಸಿದ ಅವರು, ಮೈಸೂರು ಸುತ್ತಮುತ್ತಲಿನ ಸದಭಿರುಚಿಯ, ಸಹೃದಯ ರಂಗಾಸಕ್ತರಿಗಾಗಿ ನಟನ ವಾರಾಂತ್ಯ ರಂಗ ಪ್ರದರ್ಶನಗಳನ್ನು ನಡೆಸಿಕೊಂಡು ಬಂದಿದೆ. ಆದರೆ ಈ ಬಾರಿ ವಾರಾಂತ್ಯದಲ್ಲಿ ಎರಡು ವಿಶೇಷ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದೇ ಫೆಬ್ರವರಿ ೦೩ರಂದು ಸಂಜೆ ೬.೩೦ಕ್ಕೆ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನ ರಂಗಶಾಲೆಯಲ್ಲಿ ೨೦೨೩-೨೪ನೇ ಸಾಲಿನ ರಂಗಭೂಮಿ ಡಿಪ್ಲೋಮಾ ವಿದ್ಯಾರ್ಥಿಗಳ ಎರಡನೇ ಅಭ್ಯಾಸೀ ಪ್ರಯೋಗ, ಹೆಸರಾಂತ ರಂಗಕರ್ಮಿ ಡಾ.ಶ್ರೀಪಾದ ಭಟ್ ನಿರ್ದೇಶನದ ‘ಕನ್ನಡ ಕಾವ್ಯಕಣಜ’ ನಾಟಕವನ್ನು ಪ್ರದರ್ಶನಗೊಳಿಸಲಿದ್ದಾರೆ ಎಂದರು.
ಇನ್ನು, ಫೆಬ್ರವರಿ ೦೪ರಂದು ಸಂಜೆ ೦೬.೩೦ಕ್ಕೆ ರಂಗದಾಸೋಹ (ರಿ), ಬೆಂಗಳೂರು ಅಭಿನಯಿಸುವ, ಎನ್.ಸಿ. ಮಹೇಶ್ ನಿರ್ದೇಶನದ ‘ನೀ ಒಥೆಲೋವಾದರೆ, ನಾ ಇಯಾಗೊ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ : ೭೨೫೯೫೩೭೭೭೭, ೯೪೮೦೪೬೮೩೨೭, ೯೮೪೫೫೯೫೫೦೫
‘ಕನ್ನಡ ಕಾವ್ಯಕಣಜ’ ನಾಟಕದ ಕುರಿತು: ಇದೊಂದು ಕಾವ್ಯ ಪ್ರಯೋಗ. ಕಾವ್ಯ ಪ್ರಸ್ತುತಿ. ಕನ್ನಡ ನಾಡು ನುಡಿ ಇದುವರೆಗೂ ಬೆಳೆಸಿಕೊಂಡು ಬಂದ ಸಂಬಂಧದ ವಿವಿಧ ವಿನ್ಯಾಸಗಳನ್ನು ಕವಿ ಪದಗಳ ಮೂಲಕ ಕಾಣಲಾಗಿದೆ. ಇಲ್ಲಿ ಶಾಸನಗಳಿವೆ, ಕವನಗಳಿವೆ, ಹಾಡಿದೆ, ವಚನವಿದೆ, ಕತೆಗಳಿವೆ, ಕಾದಂಬರಿಯ ಭಾಗಗಳಿವೆ. ಇವೆಲ್ಲವೂ ನಟರ ಶರೀರ ಮತ್ತು ಶಾರೀರಗಳನ್ನು ಆಧರಿಸಿ ಅಭಿನೀತಗೊಳ್ಳಲಿದೆ. ಕನ್ನಡ ಕಾವ್ಯ ಕಣಜ, ಕನ್ನಡ ಕಾವ್ಯಗಳ ರಂಗಪ್ರಸ್ತುತಿ. ಶಾಸನ ಪದಗಳಿಂದ ಆರಂಭಿಸಿ ಈ ಹೊತ್ತಿನವರೆಗಿನ ಸಾಹಿತ್ಯ ಚರಿತ್ರೆಯನ್ನು ಅನುಲಕ್ಷಿಸಿ ಅವುಗಳಲ್ಲಿ ಕೆಲವು ಪಠ್ಯಗಳನ್ನು ಆಯ್ದು ಪ್ರಸ್ತುತ ಪಡಿಸಲಾಗುತ್ತಿದೆ. ಇಲ್ಲಿ ಆದರ್ಶ ಮನುಷ್ಯರ ಹುಡುಕಾಟವಿದೆ; ಸಂಬಂಧಗಳ ವಿವಿಧ ಸ್ವರೂಪಗಳ ಅನ್ವೇಷಣೆಯಿದೆ. ವರ್ಣ, ವರ್ಗ, ಲಿಂಗ ತಾರತಮ್ಯಗಳ ಸ್ವರೂಪ ಕಾರಣಗಳ ಹುಡುಕಾಟದ ಪ್ರಯತ್ನವೂ ಇಲ್ಲಿದೆ. ಕಾವ್ಯಗಳನ್ನು ರಂಗದ ಮೇಲೆ ಪ್ರಯೋಗಿಸಬಹುದಾದ ಹಲವು ಮಾದರಿಗಳ ಪ್ರಸ್ತುತಿಯೂ ಇಲ್ಲಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…