Light
Dark

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ : ಸವಾರ ಗಂಭೀರ ಗಾಯ

ಹನೂರು : ದ್ವಿಚಕ್ರ ವಾಹನ ಸವಾರನಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

ತಾಲೂಕಿನ ಸಂದನ ಪಾಳ್ಯ ಗ್ರಾಮದ ಮರಿಯಪ್ರಕಾಶ್ (45) ಗಾಯಗೊಂಡ ವ್ಯಕ್ತಿ, ಇವರು ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನ ಪಾಳ್ಯ ಗ್ರಾಮದ ಮರಿಯಪ್ರಕಾಶ್ ಕಾರ್ಯನಿಮಿತ್ತ ರಾಮಪುರ ಗ್ರಾಮಕ್ಕೆ ಆಗಮಿಸುತ್ತಿದ್ದು ವೇಳೆ ಹನೂರು ಮಾರ್ಗವಾಗಿ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದೆ ಇದರ ಪರಿಣಾಮ ಜ್ಞಾನಪ್ರಕಾಶ್ ಅವರ ಬಲಗಾಲು ಮುರಿದಿದ್ದು ತೀವ್ರ ಗಾಯಗೊಂಡಿದ್ದಾರೆ. ಸ್ಥಳೀಯ ನಿವಾಸಿಗಳು ತಕ್ಷಣ 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ತುರ್ತು ವೈದ್ಯಕೀಯ ಸಿಬ್ಬಂದಿ ಮೂರ್ತಿ ಪ್ರಥಮ ಚಿಕಿತ್ಸೆ ನೀಡಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ಸಂಬಂಧ ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಬಣ್ಣಾರಿ ದಿಂಬಂ ನಲ್ಲಿ ಅಧಿಕ ಬಾರದ ವಾಹನಗಳಿಗೆ ನಿರ್ಬಂಧ ಏರಿರುವುದರಿಂದ ಈ ಭಾಗದಲ್ಲಿ ಅಪಘಾತದಲ್ಲಿ ಹೆಚ್ಚಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ