ಹನೂರು: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಕೆಂಚಯ್ಯನದೊಡ್ಡಿ ಗ್ರಾಮದ ಸಮೀಪ ಜರುಗಿದೆ.
ಯಳಂದೂರು ತಾಲ್ಲೂಕಿನ ಯೋಗೇಶ್ ಮಹದೇವ್ ಹಾಗೂ ಬೆಂಗಳೂರು ಮೂಲದ ರಂಜನ್ ಹರ್ಷಿತ್ ಎಂಬವರೇ ಗಾಯಗೊಂಡವರಾಗಿದ್ದಾರೆ.
ಘಟನೆಯ ವಿವರ :ಯಳಂದೂರು ಪಟ್ಟಣದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಮಲೆಮಹದೇಶ್ವರ ಬೆಟ್ಟದಲ್ಲಿ ದರ್ಶನ ಮುಗಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಪರಿಣಾಮ ವಾಹನ ಸವಾರರಿಗೆ ತೀವ್ರ ಗಾಯಗೊಂಡಿದ್ದು ತಕ್ಷಣ ಸ್ಥಳಕಾಗಮಿಸಿದ 108 ಆಂಬ್ಯುಲೆನ್ಸ್ ಸಿಬ್ಬಂದಿಗಳು ಪ್ರಥಮ ಚಿಕಿತ್ಸೆ ನೀಡಿ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.





