ಜಿಲ್ಲೆಗಳು

ದ್ವಿಚಕ್ರ ವಾಹನದಲ್ಲಿ ತೆರಳಿ ಕ್ಷೇತ್ರದ ಜನರ ಕುಂದುಕೊರತೆ ವೀಕ್ಷಿಸಿದ ಶಾಸಕ ಯತೀಂದ್ರ ಸಿದ್ದರಾಮಯ್ಯ.

ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರ ಪುತ್ರ  ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಸುತ್ತೂರು ವರುಣ ಕ್ಷೇತ್ರದ ತಾಯೂರು ಪಂಚಾಯಿತಿ ವ್ಯಾಪ್ತಿಗೆ ಸೇರಿದ ಗೆಜ್ಜಿಗನಹಳ್ಳಿ ಹಾಗೂ ಸಮೀಪದ ಹಲವಾರು  ಗ್ರಾಮಗಳಿಗೆ ದ್ವಿಚಕ್ರವಾಹನದಲ್ಲಿ ತೆರಳುವ ಮೂಲಕ ಸಾರ್ವಜನಿಕರ ಕುಂದುಕೊರತೆಗಳನ್ನು ವೀಕ್ಷಿಸಿದರು.
ಹಾಗೂ
ಗ್ರಾಮ ಸಭೆಗಳನ್ನು ನಡೆಸಲು ದ್ವಿಚಕ್ರವಾಹನದಲ್ಲಿ ತೆರಳಿದ ಅವರು  ಅಲ್ಲಿನ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಹಾಗೂ ಗ್ರಾಮದ ಎಲ್ಲಾ ಬೀದಿಗಳಲ್ಲಿರುವ ರಸ್ತೆಗಳು. ಚರಂಡಿಗಳು. ಕುಡಿಯೋ ನೀರಿನ ಮಿನಿ ಟ್ಯಾಂಕನ್ನು ವೀಕ್ಷಿಸಿದರು. ಕೆಲವು ಗ್ರಾಮಗಳ ಸಮಸ್ಯೆಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ಪರಿಹರಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಎಲ್ಲಾ ಇಲಾಖೆಯ ಅಧಿಕಾರಿಗಳು ಗ್ರಾಮ ಪಂಚಾಯಿತಿ ಅಧ್ಯಕ್ಷರು ತಾಯೂರ್ ಬಸವರಾಜು. ಗ್ರಾಮದ ಗೌಡ ರಾದ ಸಂತೋಷ್. ಗೆಜ್ಜೆನಹಳ್ಳಿ ವಿಠಲ್. ಶಿವಣ್ಣ.ಕೆಂಪಣ್ಣ. ರಂಗಸ್ವಾಮಿ.. ಗ್ರಾಮ ಪಂಚಾಯಿತಿ ಸದಸ್ಯರು ಮುಖಂಡರು ಹಾಜರಿದ್ದರು

andolanait

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

50 mins ago

ಚಿಕ್ಕಮಗಳೂರು| ತೋಟದಲ್ಲಿ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…

1 hour ago

ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ…

1 hour ago

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ…

2 hours ago

ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ

ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್‌…

3 hours ago

ನಟ ದರ್ಶನ್‌ 49ನೇ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮೀ ಶುಭಾಶಯ

ನಟ ದರ್ಶನ್‌ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ ಬೆಂಗಳೂರಿನ…

3 hours ago