ಜಿಲ್ಲೆಗಳು

ಎರಡು ವರ್ಷಗಳ ನಂತರ ಚುಂಚನಕಟ್ಟೆ ಜಲಪಾತೋತ್ಸವ

ನಾಳೆ ಸಂಜೆ ೬ ಗಂಟೆಗೆ ಸಚಿವ ಎಸ್‌ಟಿಎಸ್‌ರಿಂದ ಉದ್ಘಾಟನೆ; ಜಲಪಾತಕ್ಕೆ ವರ್ಣರಂಜಿತ ವಿದ್ಯುತ್ ದೀಪಾಲಂಕಾರ

ಭೇರ್ಯ ಮಹೇಶ್

ಕೆ.ಆರ್.ನಗರ: ಮೈಸೂರು ಜಿಲ್ಲೆಯ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಪ್ರವಾಸಿ ತಾಣವಾದ ಚುಂಚನಕಟ್ಟೆಯಲ್ಲಿ ಕಾವೇರಿ ನದಿಯ ಜಲಪಾತೋತ್ಸವ ಭಾನುವಾರ (ನ.೧೩) ಸಂಜೆ ೬ ಗಂಟೆಗೆ ನಡೆಯಲಿದೆ.

ಕಾವೇರಿ ನದಿಯ ಧನುಷ್ಕೋಟಿ ಜಲಪಾತೋತ್ಸವಕ್ಕೆ ಲೇಸರ್ ಲೈಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಜಲಪಾತ ಲೇಸರ್ ಬೆಳಕಿನಲ್ಲಿ ಜಗಮಗಿಸುತ್ತಿದ್ದು, ನೋಡುಗರ ಕಣ್ಮನ ಸೆಳೆಯುವಂತೆ ಸಾಲಿಗ್ರಾಮ ತಾಲ್ಲೂಕು ಆಡಳಿತ ಸಕಲ ವ್ಯವಸ್ಥೆಯನ್ನು ಕಲ್ಪಿಸಿದೆ.
ಚುಂಚನಕಟ್ಟೆಯ ಕಾವೇರಿ ಜಲಪಾತೋತ್ಸವ ಹಿನ್ನೆಲೆಯಲ್ಲಿ ಶ್ರೀರಾಮನ ದೇವಾಲಯ, ಬಸವ ವೃತ್ತ, ಕಾವೇರಿ ನದಿಯ ಸೇತುವೆ ಸೇರಿದಂತೆ ಮತ್ತಿತರ ಕಡೆಗಳಲ್ಲಿ ವಿದ್ಯುತ್ ದೀಪಾಲಂಕಾರ ವಾಡಲಾಗಿದ್ದು ವಿಭಿನ್ನ ರೀತಿಯಲ್ಲಿ ವಿದ್ಯುತ್ ಬೆಳೆಕಿನ ಸೊಬಗು ಕಾರ್ಯಕ್ರಮಕ್ಕೆ ಆಗಮಿಸುವವರಲ್ಲಿ ಉಲ್ಲಾಸ ತರಿಸುವುದು ಖಚಿತ.
ಶ್ರೀರಾಮನ ದೇವಸ್ಥಾನದ ಹಿಂಭಾಗದಲ್ಲಿ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದ್ದು ಎಲ್.ಇ.ಡಿ. ದೊಡ್ಡ ಪರದೆುಂ ವ್ಯವಸ್ಥೆ ಕೂಡ ವಾಡಲಾಗಿದೆ. ಜ್ಹೀ ಕನ್ನಡ ಸರಿಗಮಪ ಖ್ಯಾತಿಯ ಹಿನ್ನೆಲೆ ಗಾಯ  ಕಂಬದ ರಂಗಯ್ಯ ಸೇರಿದಂತೆ ಅನೇಕ ಖ್ಯಾತ ಗಾಯಕರು ಹಾಗೂ ರೆಮೊ ಚಿತ್ರದ ತಂಡದಿಂದ ಮನರಂಜನೆ ಕಾರ್ಯಕ್ರಮ ಜೊತೆಗೆ ಹಾಸ್ಯ ರಸದೌತಣವನ್ನು ಖ್ಯಾತ ಹಾಸ್ಯ ನಟರು ನೀಡಲಿದ್ದಾರೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಲಿದ್ದು, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಭಾಗವಹಿಸುವರು. ಶಾಸಕ ಸಾ.ರಾ.ಮಹೇಶ್ ಅಧ್ಯಕ್ಷತೆಯಲ್ಲಿ ಜಲಪಾತೋತ್ಸವ ನಡೆಯ ಲಿದೆ.

ಮುಖ್ಯ ಅತಿಥಿಗಳಾಗಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ ಮಂಡಳಿ ಅಧ್ಯಕ್ಷರು, ನಿರ್ದೇಶಕರು, ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಅಧಿಕಾರಿ ವರ್ಗದವರು ಭಾಗವಹಿಸಲಿದ್ದು, ಸಾಲಿಗ್ರಾಮ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತು ಏರ್ಪಡಿಸಿದ್ದಾರೆ.
೨ ವರ್ಷಗಳ ನಂತರ ಜಲಪಾತೋತ್ಸವ: ಕಳೆದ ಎರಡು ವರ್ಷಗಳಿಂದ ಕೋವಿಡ್‌ನಿಂದಾಗಿ ಚುಂಚನಕಟ್ಟೆ ಕಾವೇರಿ ಜಲಪಾತೋತ್ಸವ ಕಾರ್ಯಕ್ರಮ ಸ್ಥಗಿತಗೊಳಿಸಲಾಗಿತ್ತು. ಈ ಬಾರಿ ಅದ್ಧೂರಿಯಾಗಿ ಜಲಪಾತೋತ್ಸವ ಕಾರ್ಯಕ್ರಮವನ್ನು ಸರ್ಕಾರ ಶಾಸಕ ಸಾ.ರಾ.ಮಹೇಶ್ ನೇತೃತ್ವದಲ್ಲಿ ನಡೆಸಲಾಗುತ್ತಿದೆ.

 

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

3 hours ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

3 hours ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

4 hours ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

4 hours ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

4 hours ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

4 hours ago