ಶ್ರೀರಂಗಪಟ್ಟಣ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗೌಡಹಳ್ಳಿ ಗೇಟ್ ಬಳಿಯ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಗುರುವಾರ ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ ಚಿರತೆ ರಸ್ತೆ ದಾಟುವ ವೇಳೆ ಈ ಅಪಘಾತ ನಡೆದಿರುವ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ತಲೆ ಭಾಗಕ್ಕೆ ತೀವ್ರ ಪೆಟ್ಟು ಬಿದ್ದು ಮೃತಪಟ್ಟಿರುವ ಚಿರತೆಯು ಒಂದೂವರೆ ವರ್ಷದ ಹೆಣ್ಣು ಚಿರತೆ ಎಂದು ಗುರುತಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.