ಜಿಲ್ಲೆಗಳು

ಮೈಸೂರು ವಿವಿ : ಕುಲಪತಿ ನೇಮಕ, ಹೈಕೋರ್ಟ್ ನಿಂದ ಮಧ್ಯಂತರ ತಡೆಯಾಜ್ಞೆ

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ನೂತನ ಕುಲಪತಿ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಇದರಿಂದಾಗಿ ನೂತನ ಕುಲಪತಿ ನೇಮಕ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳ ಹಿಂದೆ ಮೈಸೂರು ವಿವಿ ಕುಲಪತಿ ಆಯ್ಕೆ ಸಂಬಂಧ ಶೋಧನಾ ಸಮಿತಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಬೆಂಗಳೂರಿನ ಸಿಎಂಆರ್ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಂ.ಎಸ್.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಶೋಧನಾ ಸಮಿತಿ ಸಭೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಡಿ.ಎಸ್.ಗುರು, ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಜಿ.ವೆಂಕಟೇಶ್ ಕುಮಾರ್, ಬೆಂಗಳೂರು ವಿಶ್ವವಿದ್ಯಾನಿಲಯದ ಡಾ.ಶರತ್ ಅನಂತಮೂರ್ತಿ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು, ಕುಲಪತಿ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದ 71 ಮಂದಿಯಲ್ಲಿ ಮೂವರ ಹೆಸರನ್ನು ಪರಿಗಣಿಸಿ ಉಳಿದವರ 68 ಅರ್ಜಿಯನ್ನು ತಿರಸ್ಕಾರ ಮಾಡಲಾಗಿತ್ತು. ಇದರಲ್ಲಿ ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ. ರಾಜಶೇಖರ್ ಅವರ ಅರ್ಜಿಯನ್ನೂ ತಿರಸ್ಕರಿಸಲಾಗಿತ್ತು. ತಿರಸ್ಕಾರ ಮಾಡುವಾಗ ತಮ್ಮ ವಿರುದ್ಧದ ಮೊಕದ್ದಮೆ ವಿಚಾರಣೆಯಲ್ಲಿ ಬಾಕಿ ಉಳಿದಿದೆ ಎನ್ನುವ ಅಂಶವನ್ನು ಗುರುತುಮಾಡಿದ್ದರು. ಆದರೆ, ತಮ್ಮ ವಿರುದ್ಧ ಯಾವುದೇ ಪ್ರಕರಣ ಅಥವಾ ವಿಚಾರಣೆ ಇಲ್ಲವೆಂದು ಹೇಳಿ ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ. ರಾಜಶೇಖರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಮೈಸೂರು ವಿವಿ ಕುಲಪತಿ ನೇಮಕಾತಿಗೆ ಸಂಬಂಧಪಟ್ಟಂತೆ ತಡೆಯಾಜ್ಞೆ ಕೊಡುವ ಜತೆಗೆ ರಾಜ್ಯಸರ್ಕಾರ ಹೊರಡಿಸಿದ್ದ ಅಧಿಸೂಚನೆ ದಿನಾಂಕ: ೦೮.೧೧.೨೦೨೨ರ ಸಂಖ್ಯೆ ಇಡಿ ೫೭ ಯುಎಂವಿ ೨೦೨೨ರ ವಿಚಾರಣೆಗೂ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.

ವಿಳಂಬ ಸಾಧ್ಯತೆ: ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸುವ ತನಕ ವಿಳಂಬವಾಗುವ ಸಂಭವವಿದೆ. ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡು ದಾಖಲೆ ಸಲ್ಲಿಸುವ ತನಕ ಪೂರ್ಣಾವಧಿ ಕುಲಪತಿ ನೇಮಿಸುವುದಕ್ಕೆ ಅಡ್ಡಿಯಾಗಲಿದೆ.

andolanait

Recent Posts

ಓದುಗರ ಪತ್ರ: ಶಾಸಕರ ಅಸಂಬದ್ಧ ಹೇಳಿಕೆ

ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…

2 hours ago

ಓದುಗರ ಪತ್ರ: ಅಮಿತ್‌ ಶಾ ಹೇಳಿಕೆ ಖಂಡನೀಯ

ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…

2 hours ago

ವಾಹನ ಸಂಚಾರಕ್ಕೆ ಸಂಚಕಾರ ತರುತ್ತಿರುವ ಅವರೆಕಾಯಿ ವ್ಯಾಪಾರ

ದಾ.ರಾ. ಮಹೇಶ್‌ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…

3 hours ago

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

  ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…

4 hours ago

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

12 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

13 hours ago