ಮೈಸೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯಶಸ್ವಿನಿ ಯೋಜನೆ ಮರುಜಾರಿಯಿಂದ ಜನವರಿ ಒಂದೇ ತಿಂಗಳಲ್ಲೇ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಸುಮಾರು ಒಂದು ಸಾವಿರಕ್ಕೂ ಅಧಿಕ ಸದಸ್ಯರು ಗುಣಮಟ್ಟದ ಆರೋಗ್ಯ ಸೇವೆ ಪಡೆದುಕೊಂಡಿದ್ದು ಈ ಯೋಜನೆಗೆ ಅಭೂತಪೂರ್ವ ಸ್ಪಂದನೆ ದೊರೆತಿದೆ ಎಂದು ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದ್ದಾರೆ.
ಯಶಸ್ವಿನಿ ಯೋಜನೆ ಕುರಿತು ಮಾತನಾಡಿದ ಸಚಿವರು, ಜನವರಿ ಅಂತ್ಯದವರೆಗೆ 30 ಲಕ್ಷ ಸದಸ್ಯರ ಗುರಿಗೆ ಎದುರಾಗಿ 33.10 ಲಕ್ಷ ಸದಸ್ಯರನ್ನು ನೋಂದಾಯಿಸಿ ಗುರಿ ಮೀರಿ ಸಾಧನೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಸದಸ್ಯರ ನೋಂದಣಿ ಕಾರ್ಯ ಮುಂದುವರೆಯುತ್ತಿರುವುದರ ಜೊತೆಗೆ 27 ಜಿಲ್ಲೆಗಳಲ್ಲಿನ 127 ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಜನವರಿ ಒಂದೇ ತಿಂಗಳಲ್ಲಿ 1000ಕ್ಕೂ ಹೆಚ್ಚು ಫಲಾನುಭವಿಗಳು ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಯಶಸ್ವಿನಿ ಯೋಜನೆಯಡಿ ಇದುವರೆಗೂ ರಾಜ್ಯಾದ್ಯಂತ ಪ್ರತಿಷ್ಠಿತ ಮೆಡಿಕಲ್ ಕಾಲೇಜು ಆಸ್ಪತ್ರೆಗಳು, ಸರ್ಕಾರಿ ಜಿಲ್ಲಾ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳು ಸೇರಿದಂತೆ 474 ನೆಟ್‌ವರ್ಕ್ ಆಸ್ಪತ್ರೆಗಳು ಟ್ರಸ್ಟ್ ನಲ್ಲಿ ನೋಂದಾಯಿಸಿಕೊಂಡಿವೆ. ಜನವರಿ 1ರಿಂದಲೇ ಫಲಾನುಭವಿಗಳಿಗೆ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಹೃದಯ ಸಂಬಂಧಿ ಕಾಯಿಲೆ, ಕಿವಿ, ಮೂಗು, ಗಂಟಲು ವ್ಯಾದಿಗಳು, ನರ, ಮೂಳೆಗೆ ಸಂಬಂಧಿಸಿದ ಕಾಯಿಲೆಗಳು ಸೇರಿದಂತೆ ಇತ್ಯಾದಿ ರೋಗಗಳಿಗೆ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಸದಸ್ಯರು ಯೂನಿಕ್ ಐಡಿ ಸಂಖ್ಯೆಯುಳ್ಳ ಪ್ಲಾಸ್ಟಿಕ್ ಕಾರ್ಡ್ ಹಾಜರುಪಡಿಸಿ 1650 ಚಿಕಿತ್ಸೆಗಳನ್ನು ನಗದುರಹಿತವಾಗಿ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
ಚಿಕಿತ್ಸೆ ದರಗಳನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಹಿಂದಿನ ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ದರ ಹೆಚ್ಚಿದ್ದಲ್ಲಿ ಆ ದರವನ್ನು ಅಥವಾ ಪ್ರಸ್ತುತ ಯೋಜನೆಗೆ ಪರಿಗಣಿಸಿರುವ ಆಯುಷ್ಮಾನ ಭಾರತ ಚಿಕಿತ್ಸೆ ದರಗಳು ಹೆಚ್ಚಿದ್ದಲ್ಲಿ ಅವುಗಳನ್ನು ಪರಿಗಣಿಸಲು ಆದೇಶವಾಗಿರುತ್ತದೆ. ಅಂದರೆ ಯಾವ ಯೋಜನೆಯಲ್ಲಿ ಹೆಚ್ಚಿನ ದರ ಇರುತ್ತದೆಯೋ ಆ ದರವನ್ನು ಪರಿಗಣಿಸಿ ಆಸ್ಪತ್ರೆಗಳ ಬಿಲ್ ಗಳನ್ನು ಪಾವತಿಸಲಾಗುತ್ತದೆ ಎಂದು ಹೇಳಿದ್ದಾರೆ.
ನೆಟ್ ವರ್ಕ್ ಆಸ್ಪತ್ರೆಗಳು ಬಿಲ್ಲುಗಳು ಸಲ್ಲಿಸಿದ ಒಂದು ತಿಂಗಳೊಳಗೆ ಅವುಗಳನ್ನು ಪಾವತಿಸಲು ವ್ಯವಸ್ಥೆ ಮಾಡಲಾಗಿದೆ. ಮೊದಲನೇ ಕಂತಿನ ಬಿಲ್ ಅನ್ನು ಫೆಬ್ರವರಿ 15ರೊಳಗೆ ಪಾವತಿ ಮಾಡಲು ಉದ್ದೇಶಿಸಲಾಗಿದೆ. ತದನಂತರ ಮುಂದಿನ ಬಿಲ್ ಗಳನ್ನು ಪ್ರತಿ ತಿಂಗಳು ಪಾವತಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಚನ್ನಪಟ್ಟಣ: ಡಿಸಿಎಂ ಡಿಕೆ ಶಿವಕುಮಾರ್ ಅವರು ನಿನ್ನೆ ಕ್ಷೇತ್ರದ ಪ್ರಚಾರ ವೇಳೆ ಚನ್ನಪಟ್ಟಣಕ್ಕೆ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ಕೊಡುಗೆ…
ಮಡಿಕೇರಿ: ರಾತ್ರೋರಾತ್ರಿ ಈ ಭಾಗದ ಜನತೆಯ ಜಮೀನು ವಕ್ಫ್ ಆಸ್ತಿವೆಂದು ಸೃಷ್ಠಿಯಾಗುತ್ತಿದೆ. ಹೀಗಾಗಿ ನಮ್ಮ ಆಸ್ತಿಯನ್ನು ಉಳಿಸಿಕೊಳ್ಳಲು ಸರ್ಕಾರದ ವಿರುದ್ಧ…
ಬಳ್ಳಾರಿ: ತಾನು ಮುಖ್ಯಮಂತ್ರಿಯಾಗಿದ್ದ ವೇಳೆ ಹೆಣ್ಣು ಮಗುವಿನ ಭವಿಷ್ಯಕ್ಕಾಗಿ ರೂಪಿಸಿದ್ದ ಭಾಗ್ಯಲಕ್ಷ್ಮೀ ಬಾಂಡ್ ಯೋಜನೆಗೆ ಹಣ ನೀಡಲಾಗದೇ ಆ ಯೋಜನೆಯನ್ನೂ…
ಮೈಸೂರಿನಿಂದ ಹೊರಡುವ ರೈಲುಗಳು ಕ್ರ.ಸಂ - ರೈಲು ಸಂಖ್ಯೆ - ರೈಲಿನ ಹೆಸರು - ಮೈಸೂರಿನಿಂದ ಎಲ್ಲಿಗೆ -…
ಮಡಿಕೇರಿ: ಕೇರಳದಿಂದ ಕೊಡಗು ಜಿಲ್ಲೆಗೆ ಅಸುರಕ್ಷಿತ ಆಹಾರ ಪದಾರ್ಥ ಸಾಗಾಟ ಮಾಡುತ್ತಿರುವ ಆರೋಪದ ಹಿನ್ನೆಲೆ ಆಹಾರ ಇಲಾಖೆಯ ಅಧಿಕಾರಿಗಳು ಶನಿವಾರ…
ಕಲ್ಯಾಣ (ಶಿಗ್ಗಾವಿ): ಕಾಂಗ್ರೆಸ್ ಪಕ್ಷ ಸದಾ ಬಡವರ ಬಗ್ಗೆ ಚಿಂತಿಸುವ ಪಕ್ಷ. ಜನ ಸಾಮಾನ್ಯರ ಅಭಿವೃದ್ಧಿಯೇ ಪಕ್ಷದ ಗುರಿ ಎಂದು…