ಜಿಲ್ಲೆಗಳು

ಯಶಸ್ವಿನಿ ಯೋಜನೆಗೆ ಅಭೂತಪೂರ್ವ ಸ್ಪಂದನೆ : ಎಸ್.ಟಿ.ಸೋಮಶೇಖರ್

ಮೈಸೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯಶಸ್ವಿನಿ ಯೋಜನೆ ಮರುಜಾರಿಯಿಂದ ಜನವರಿ ಒಂದೇ ತಿಂಗಳಲ್ಲೇ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಸುಮಾರು ಒಂದು ಸಾವಿರಕ್ಕೂ ಅಧಿಕ ಸದಸ್ಯರು ಗುಣಮಟ್ಟದ ಆರೋಗ್ಯ ಸೇವೆ ಪಡೆದುಕೊಂಡಿದ್ದು ಈ ಯೋಜನೆಗೆ ಅಭೂತಪೂರ್ವ ಸ್ಪಂದನೆ ದೊರೆತಿದೆ ಎಂದು ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದ್ದಾರೆ.

ಯಶಸ್ವಿನಿ ಯೋಜನೆ ಕುರಿತು ಮಾತನಾಡಿದ ಸಚಿವರು, ಜನವರಿ ಅಂತ್ಯದವರೆಗೆ 30 ಲಕ್ಷ ಸದಸ್ಯರ ಗುರಿಗೆ ಎದುರಾಗಿ 33.10 ಲಕ್ಷ ಸದಸ್ಯರನ್ನು ನೋಂದಾಯಿಸಿ ಗುರಿ ಮೀರಿ ಸಾಧನೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಸದಸ್ಯರ ನೋಂದಣಿ ಕಾರ್ಯ ಮುಂದುವರೆಯುತ್ತಿರುವುದರ ಜೊತೆಗೆ 27 ಜಿಲ್ಲೆಗಳಲ್ಲಿನ 127 ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಜನವರಿ ಒಂದೇ ತಿಂಗಳಲ್ಲಿ 1000ಕ್ಕೂ ಹೆಚ್ಚು ಫಲಾನುಭವಿಗಳು ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಯಶಸ್ವಿನಿ ಯೋಜನೆಯಡಿ ಇದುವರೆಗೂ ರಾಜ್ಯಾದ್ಯಂತ ಪ್ರತಿಷ್ಠಿತ ಮೆಡಿಕಲ್ ಕಾಲೇಜು ಆಸ್ಪತ್ರೆಗಳು, ಸರ್ಕಾರಿ ಜಿಲ್ಲಾ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳು ಸೇರಿದಂತೆ 474 ನೆಟ್‌ವರ್ಕ್ ಆಸ್ಪತ್ರೆಗಳು ಟ್ರಸ್ಟ್ ನಲ್ಲಿ ನೋಂದಾಯಿಸಿಕೊಂಡಿವೆ. ಜನವರಿ 1ರಿಂದಲೇ ಫಲಾನುಭವಿಗಳಿಗೆ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ‌. ಹೃದಯ ಸಂಬಂಧಿ ಕಾಯಿಲೆ, ಕಿವಿ, ಮೂಗು, ಗಂಟಲು ವ್ಯಾದಿಗಳು, ನರ, ಮೂಳೆಗೆ ಸಂಬಂಧಿಸಿದ ಕಾಯಿಲೆಗಳು ಸೇರಿದಂತೆ ಇತ್ಯಾದಿ ರೋಗಗಳಿಗೆ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಸದಸ್ಯರು ಯೂನಿಕ್ ಐಡಿ ಸಂಖ್ಯೆಯುಳ್ಳ ಪ್ಲಾಸ್ಟಿಕ್ ಕಾರ್ಡ್ ಹಾಜರುಪಡಿಸಿ 1650 ಚಿಕಿತ್ಸೆಗಳನ್ನು ನಗದುರಹಿತವಾಗಿ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

ಚಿಕಿತ್ಸೆ ದರಗಳನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಹಿಂದಿನ ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ದರ ಹೆಚ್ಚಿದ್ದಲ್ಲಿ ಆ ದರವನ್ನು ಅಥವಾ ಪ್ರಸ್ತುತ ಯೋಜನೆಗೆ ಪರಿಗಣಿಸಿರುವ ಆಯುಷ್ಮಾನ ಭಾರತ ಚಿಕಿತ್ಸೆ ದರಗಳು ಹೆಚ್ಚಿದ್ದಲ್ಲಿ ಅವುಗಳನ್ನು ಪರಿಗಣಿಸಲು ಆದೇಶವಾಗಿರುತ್ತದೆ. ಅಂದರೆ ಯಾವ ಯೋಜನೆಯಲ್ಲಿ ಹೆಚ್ಚಿನ ದರ ಇರುತ್ತದೆಯೋ ಆ ದರವನ್ನು ಪರಿಗಣಿಸಿ ಆಸ್ಪತ್ರೆಗಳ ಬಿಲ್ ಗಳನ್ನು ಪಾವತಿಸಲಾಗುತ್ತದೆ ಎಂದು ಹೇಳಿದ್ದಾರೆ.

ನೆಟ್ ವರ್ಕ್ ಆಸ್ಪತ್ರೆಗಳು ಬಿಲ್ಲುಗಳು ಸಲ್ಲಿಸಿದ ಒಂದು ತಿಂಗಳೊಳಗೆ ಅವುಗಳನ್ನು ಪಾವತಿಸಲು ವ್ಯವಸ್ಥೆ ಮಾಡಲಾಗಿದೆ. ಮೊದಲನೇ ಕಂತಿನ ಬಿಲ್ ಅನ್ನು ಫೆಬ್ರವರಿ 15ರೊಳಗೆ ಪಾವತಿ ಮಾಡಲು ಉದ್ದೇಶಿಸಲಾಗಿದೆ. ತದನಂತರ ಮುಂದಿನ ಬಿಲ್ ಗಳನ್ನು ಪ್ರತಿ ತಿಂಗಳು ಪಾವತಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

andolanait

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

13 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

13 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

14 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

15 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

15 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

18 hours ago