ಚಾಮರಾಜನಗರ: ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ತೀವ್ರ ಹಿಂದುಳಿದಿರುವ ಉಪ್ಪಾರ ಸಮುದಾಯ ವನ್ನು ಪರಿಶಿಷ್ಟರ ಮೀಸಲಾತಿ ಪಟ್ಟಿಗೆ ಸೇರಿಸಬೇಕು ಎಂದು ರಾಜ್ಯ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಬಾಗಳಿ ರೇವಣ್ಣ ಸರ್ಕಾರವನ್ನು ಒತ್ತಾಯಿಸಿದರು.
ನಗರದ ವಾಲ್ಮೀಕಿ ಭವನದಲ್ಲಿ ಉಪ್ಪಾರ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ನಡೆದ ಉಪ್ಪಾರ ಸಮುದಾಯವನ್ನು ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಹೋರಾಟ ರೂಪಿಸುವ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದು ಆಡಳಿತ ನಡೆದ ಎಲ್ಲ ರಾಜಕೀಯ ಪಕ್ಷಗಳ ಉಪ್ಪಾರ ಸಮುದಾಯವನ್ನು ಮತಬ್ಯಾಂಕ್ ಮಾಡಿಕೊಂಡಿವೇ ಹೊರತು ಸಮಾಜ ಅಭಿವೃದ್ದಿಯನ್ನು ಸಂಪೂರ್ಣವಾಗಿ ಕಡೆಗಣಿಸಿವೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಉಪ್ಪಾರ ಸಮಾಜ 50 ಲಕ್ಷಕ್ಕೂ ಹೆಚ್ವಿನ ಜನಸಂಖ್ಯೆ ಹೊಂದಿದ್ದು, 36 ವಿಧಾನಸಭಾ ಕ್ಷೇತ್ರದಲ್ಲಿ ನಿರ್ಣಾಯಕವಾಗಿದ್ದೇವೆ ಉಪ್ಪಾರ ಸನುದಾಯವನ್ನು ಮೀಸಲಾತಿ ಪಟ್ಟಿಗೆ ಸೇರಿಸಬೇಕು ಇಲ್ಲದ್ದಿದ್ದರೆ ಮುಂದಿನ ಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸುವುದಾಗಿ ರಾಜಕೀಯ ಪಕ್ಷಗಳಿಗೆ ಎಚ್ಚರಿಸಿದರು.
ಮುಖಂಡ ಜಿ.ಎಂ.ಗಾಢ್ಕರ್ ಮಾತನಾಡಿ, ಯಾವ ಅಧ್ಯಯನವನ್ನು ಮಾಡದೇ ನೇರವಾಗಿ ಮೇಲ್ವರ್ಗದವರಿಗೆ ಶೇ. 10 ರಷ್ಟು ಮೀಸಲಾತಿ ನೀಡಿದ್ದೀರಿ. ಆದರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಲು ಕುಲಶಾಸ್ತ್ರ ಆಧ್ಯಯನ ಮಾಡುವುದು ಒಂದು ಬ್ಲಾಕ್ ಮೇಲ್ ಮಾಡುವ ತಂತ್ರವಾಗಿದೆ. ಚಿನ್ನಪ್ಪರೆಡ್ಡಿ ಆಯೋಗ, ಎಲ್.ಜಿ. ಹಾವನೂರು ಆಯೋಗ ಹಾಗೂ ವೆಂಕಟಸ್ವಾಮಿ ಆಯೋಗದ ಪ್ರಕಾರವೇ ಉಪ್ಪಾರ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.
ಜಿ.ಪಂ.ಮಾಜಿ ಅಧ್ಯಕ್ಷ ಸಿ.ಎ.ಮಹದೇವಶೆಟ್ಟಿ ಮಾತನಾಡಿದರು.
ಸಭೆಯಲ್ಲಿ ಸಮುದಾಯದ ಮಂಜುನಾಥಸ್ವಾಮೀಜಿ ಅವರ ನೇತೃತ್ವದಲ್ಲಿ ಉಪ್ಪಾರ ಸಮುದಾಯದ 88 ಗಡಿಮನೆ ಯಜಮಾನರ ಸಮ್ಮುಖದಲ್ಲಿ ಉಪ್ಪಾರ ಸಮುದಾಯವನ್ನು ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಬೃಹತ್ ಮಟ್ಟದಲ್ಲಿ ಹೋರಾಟವನ್ನು ಹಮ್ಮಿಕೊಳ್ಳಲು ಮುಂದಿನ ದಿನಗಳಲ್ಲಿ ದಿನಾಂಕ ನಿಗದಿಪಡಿಸಲು ತೀರ್ಮಾನಿಸಲಾಯಿತು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…