ಸುದ್ದಿಗೋಷ್ಠಿಯಲ್ಲಿ ಮಹದೇವಸ್ವಾಮಿ ಮನವಿ
ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಮಹಿಳೆಗೆ ಕಪಾಲ ಮೋಕ್ಷ ಘಟನೆ ಅಚಾನಕ್ ಆಗಿ ನಡೆದಿದ್ದು, ವಿವಿಧ ಸಂಘಟನೆಗಳ ಮುಖಂಡರು ಈ ಘಟನೆಯನ್ನೇ ದೊಡ್ಡದಾಗಿ ಬಿಂಬಿಸಿ ಅಪಪ್ರಚಾರ ಮುಂದುವರಿಸಬಾರದು ಎಂದು ಬಸವಕೇಂದ್ರದ ಜಿಲ್ಲಾಧ್ಯಕ್ಷ ಎನ್‌ರಿಚ್ ಮಹದೇವಸ್ವಾಮಿ ಅವರು ಮನವಿ ಮಾಡಿದರು.
ಅಚಾನಕ್ ಘಟನೆಯನ್ನು ಮುಂದಿಟ್ಟುಕೊAಡು ಕೆಲವರು ಸ್ವಾರ್ಥ ರಾಜಕಾರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ. ಸಚಿವರು ಜಾತಿಭೇದ ಮಾಡದೆ ಎಲ್ಲರೊಡನೆ ಬೆರೆತು ಜಿಲ್ಲೆಯ ಅಭಿವೃದ್ದಿಗೆ ದುಡಿಯುತ್ತಿದ್ದಾರೆ. ಇವರಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಎಂದು ಕೋರಿದರು.
ಘಟನೆ ಸಂಬoಧ ಸೋಮಣ್ಣ ಕ್ಷಮೆಯಾಚಿಸಿದ್ದಾರೆ. ಕೆಂಪಮ್ಮ ಕೂಡ ಸಚಿವರು ನನಗೆ ಹೊಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆಕೆಗೆ ಸಚಿವರು ಸ್ಥಳದಲ್ಲೇ ನಿವೇಶನ ಹಕ್ಕು ಪತ್ರ ಕೊಡಿಸಿದ್ದಾರೆ. ಆದರೂ ದಲಿತ, ರೈತ ಸಂಘಟನೆಗಳು ಘಟನೆಯನ್ನು ದೊಡ್ಡದಾಗಿ ಬಿಂಬಿಸುವುದು ಸರಿಯಲ್ಲ ಎಂದರು.
ಸಚಿವರು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಇದೇ ರೈತ ಸಂಘದ ಮುಖಂಡರು ೩ ತಿಂಗಳ ಹಿಂದೆ ಸೋಮಣ್ಣ ಅವರನ್ನು ಸನ್ಮಾನಿಸಿದ್ದರು. ಈಗ ತಿರುಗಿ ಬಿದ್ದಿರುವುದು ಸರಿಯಲ್ಲ. ಪೌರ ಕಾರ್ಮಿಕರಿಗೆ ಮನೆ ಹಕ್ಕುಪತ್ರ ವಿತರಣೆ ಸಮಾರಂಭದಲ್ಲಿ ಭಾಗವಹಿಸಿದ್ದು ತಪ್ಪೇ ? ಸಂಸದರೊಡನೆ ಸಮಾಲೋಚನೆ ಮಾಡಿ ೧ ಗಂಟೆ ವಿಳಂಬವಾಗಿ ರೈತರ ಸಭೆಗೆ ಆಗಮಿಸಿದ್ದು ತಪ್ಪೇ ಎಂದು ಪ್ರಶ್ನಿಸಿದರು.
ಸಚಿವರು ಜಿಲ್ಲೆಯಲ್ಲಿ ಹಲವು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ. ಸದ್ಯವೇ ಮುಖ್ಯಮಂತ್ರಿ ಅವರನ್ನು ಜಿಲ್ಲೆಗೆ ಆಹ್ವಾನಿಸಿ ಜಿಲ್ಲೆಯಲ್ಲಿ ಬಾಕಿಯಿರುವ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ಕೊಡಿಸಲು ಮುಂದಾಗಿದ್ದಾರೆ. ಅಭಿವೃದ್ಧಿ ದೃಷ್ಟಿಯಿಂದ ಸೋಮಣ್ಣ ಅವರೊಡನೆ ಸಂಘಟನೆಗಳು ಕೈಜೋಡಿಸಬೇಕು ಎಂದು ಕೋರಿದರು.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…