ಜಿಲ್ಲೆಗಳು

ವಿ.ಸೋಮಣ್ಣ ವಿರುದ್ಧ ಅಪಪ್ರಚಾರ ಬೇಡ

ಸುದ್ದಿಗೋಷ್ಠಿಯಲ್ಲಿ  ಮಹದೇವಸ್ವಾಮಿ ಮನವಿ

ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಮಹಿಳೆಗೆ ಕಪಾಲ ಮೋಕ್ಷ ಘಟನೆ ಅಚಾನಕ್ ಆಗಿ ನಡೆದಿದ್ದು, ವಿವಿಧ ಸಂಘಟನೆಗಳ ಮುಖಂಡರು ಈ ಘಟನೆಯನ್ನೇ ದೊಡ್ಡದಾಗಿ ಬಿಂಬಿಸಿ ಅಪಪ್ರಚಾರ ಮುಂದುವರಿಸಬಾರದು ಎಂದು ಬಸವಕೇಂದ್ರದ ಜಿಲ್ಲಾಧ್ಯಕ್ಷ ಎನ್‌ರಿಚ್ ಮಹದೇವಸ್ವಾಮಿ ಅವರು ಮನವಿ ಮಾಡಿದರು.
ಅಚಾನಕ್ ಘಟನೆಯನ್ನು ಮುಂದಿಟ್ಟುಕೊAಡು ಕೆಲವರು ಸ್ವಾರ್ಥ ರಾಜಕಾರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ. ಸಚಿವರು ಜಾತಿಭೇದ ಮಾಡದೆ ಎಲ್ಲರೊಡನೆ ಬೆರೆತು ಜಿಲ್ಲೆಯ ಅಭಿವೃದ್ದಿಗೆ ದುಡಿಯುತ್ತಿದ್ದಾರೆ. ಇವರಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಎಂದು ಕೋರಿದರು.
ಘಟನೆ ಸಂಬoಧ ಸೋಮಣ್ಣ ಕ್ಷಮೆಯಾಚಿಸಿದ್ದಾರೆ. ಕೆಂಪಮ್ಮ ಕೂಡ ಸಚಿವರು ನನಗೆ ಹೊಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆಕೆಗೆ ಸಚಿವರು ಸ್ಥಳದಲ್ಲೇ ನಿವೇಶನ ಹಕ್ಕು ಪತ್ರ ಕೊಡಿಸಿದ್ದಾರೆ. ಆದರೂ ದಲಿತ, ರೈತ ಸಂಘಟನೆಗಳು ಘಟನೆಯನ್ನು ದೊಡ್ಡದಾಗಿ ಬಿಂಬಿಸುವುದು ಸರಿಯಲ್ಲ ಎಂದರು.
ಸಚಿವರು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಇದೇ ರೈತ ಸಂಘದ ಮುಖಂಡರು ೩ ತಿಂಗಳ ಹಿಂದೆ ಸೋಮಣ್ಣ ಅವರನ್ನು ಸನ್ಮಾನಿಸಿದ್ದರು. ಈಗ ತಿರುಗಿ ಬಿದ್ದಿರುವುದು ಸರಿಯಲ್ಲ. ಪೌರ ಕಾರ್ಮಿಕರಿಗೆ ಮನೆ ಹಕ್ಕುಪತ್ರ ವಿತರಣೆ ಸಮಾರಂಭದಲ್ಲಿ ಭಾಗವಹಿಸಿದ್ದು ತಪ್ಪೇ ? ಸಂಸದರೊಡನೆ ಸಮಾಲೋಚನೆ ಮಾಡಿ ೧ ಗಂಟೆ ವಿಳಂಬವಾಗಿ ರೈತರ ಸಭೆಗೆ ಆಗಮಿಸಿದ್ದು ತಪ್ಪೇ ಎಂದು ಪ್ರಶ್ನಿಸಿದರು.
ಸಚಿವರು ಜಿಲ್ಲೆಯಲ್ಲಿ ಹಲವು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ. ಸದ್ಯವೇ ಮುಖ್ಯಮಂತ್ರಿ ಅವರನ್ನು ಜಿಲ್ಲೆಗೆ ಆಹ್ವಾನಿಸಿ ಜಿಲ್ಲೆಯಲ್ಲಿ ಬಾಕಿಯಿರುವ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ಕೊಡಿಸಲು ಮುಂದಾಗಿದ್ದಾರೆ. ಅಭಿವೃದ್ಧಿ ದೃಷ್ಟಿಯಿಂದ ಸೋಮಣ್ಣ ಅವರೊಡನೆ ಸಂಘಟನೆಗಳು ಕೈಜೋಡಿಸಬೇಕು ಎಂದು ಕೋರಿದರು.

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

17 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

17 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

17 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

17 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

17 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

17 hours ago