ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ರಾಜೀನಾಮೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ವತಿಯಿಂದ ತಾಲೂಕಿನ ಸಂತೇಮರಹಳ್ಳಿಯಲ್ಲಿ ರಸ್ತೆತಡೆ ನಡೆಸಲಾಯಿತು.
ಸಂತೇಮರಹಳ್ಳಿ ಇಂಡಿಯನ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಮೈಸೂರು ವಿಭಾಗೀಯ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು, ನಗರಸಭಾ ಸದಸ್ಯ ಆರ್.ಪಿ. ನಂಜುಂಡಸ್ವಾಮಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ರಾಷ್ಡ್ರೀಯ ಹೆದ್ದಾರಿ 209ರ ಮೂಲಕ ಸಂತೇಮರಹಳ್ಳಿ ವೃತ್ತಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ, ಸಚಿವ ವಿ.ಸೋಮಣ್ಣ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಮೈಸೂರು ವಿಭಾಗೀಯ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು ಮಾತನಾಡಿ, ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಕಷ್ಠ ಹೇಳಿಕೊಳ್ಳಲು ಬಂದಿದ್ದ ದಲಿತ ಮಹಿಳೆಗೆ ಸಚಿವ ವಿ.ಸೋಮಣ್ಣ ಕಾಪಾಳಮೋಕ್ಷ ಮಾಡಿರುವುದು ಒಂದು ದೊಡ್ಡ ದುರಂತವಾಗಿದೆ ಇದು ತೀವ್ರ ಖಂಡನೀಯ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಸರ್ಕಾರವೇ ಸಚಿವ ಸಂಪುಟದಿAದ ವಜಾಮಾಡಬೇಕು. ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ಮಾತನಾಡಿ, ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಕಷ್ಠ ಹೇಳಿಕೊಳ್ಳಲು ಬಂದಿದ್ದ ಕೆಂಪಮ್ಮ ಎಂಬ ಮಹಿಳೆಗೆ ಸಚಿವ ವಿ.ಸೋಮಣ್ಣ ಕಾಪಾಳಮೋಕ್ಷ ಮಾಡಿ ಖಂಡನೀಯ ಎಂದರು.
ಪ್ರತಿಭಟನೆಯಲ್ಲಿ ರಾಜ್ಯ ಉಪ್ಪಾರ ಎಸ್‌ಟಿ ಹೋರಾಟ ಸಮಿತಿ ಅಧ್ಯಕ್ಷ ಬಾಗಳಿರೇವಣ್ಣ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ)ದ ಜಿಲ್ಲಾ ಸಂಘಟನಾ ಸಂಚಾಲಕರಾದ ನಾಗಣ್ಣ, ಕೆ.ವೀರ, ಮಹದೇವಸ್ವಾಮಿ, ರವಿಕುಮಾರ್, ಶಿವಣ್ಣ, ಮುರುಗೇಶ್, ರಾಚಪ್ಪ, ಆಮ್ ಆದ್ಮಿ ಪಕ್ಷದ ಮುಖಂಡರಾದ ನಾಗೇಂದ್ರ, ಹರೀಶ್, ಕೆಂಪಣ್ಣ, ಲಿಂಗರಾಜು, ಜಾನ್, ಕರುನಾಡ ವಿಜಯಸೇನೆ ಮಂಜುನಾಯಕ, ಜಗದೀಶ್, ಸಿದ್ದರಾಜು, ನಂಜುಂಡಸ್ವಾಮಿ, ಮೋಹನ್ ಕುಮಾರ್ ಇತರರು ಭಾಗವಹಿಸಿದ್ದರು.
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…