ಹನೂರು : ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಶನಿವಾರ ಸಂಜೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಸಚಿವ ವಿ ಸೋಮಣ್ಣ ರವರ ಪತ್ನಿ ಶೈಲಜಾ ಪುತ್ರಿ ಪ್ರಿಯಾ ಮೊಮ್ಮಕಳಾದ ದಕ್ಷ ಹಾಗೂ ಗೌರಿ ಕುಟುಂಬ ಸಮೇತ ದರ್ಶನ ಪಡೆದರು.ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪ ಕಾರ್ಯದರ್ಶಿ ಬಸವರಾಜು, ದೇವಾಲಯದ ಆಗಮಿಕ ಕರವೀರ ಸ್ವಾಮಿ, ಬಿಜೆಪಿ ಟಿಕೆಟ್ ಆಕಾಂಕ್ಷಿ ನಿಶಾಂತ್, ಮುಖಂಡರುಗಳಾದ ಪೊನ್ನಾಚಿ ಮಹದೇವಸ್ವಾಮಿ, ಚೇತನ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಪ್ರತಿಮೆ ವೀಕ್ಷಣೆ : ವಿಶೇಷ ಪೂಜೆ ಸಲ್ಲಿಸಿದ ನಂತರ ದೀಪದ ಗಿರಿ ಒಡ್ಡುವಿನಲ್ಲಿ ನಿರ್ಮಾಣ ಮಾಡುತ್ತಿರುವ 108 ಅಡಿ ಪ್ರತಿಮೆ ಕಾಮಗಾರಿಯನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಮಾತನಾಡಿದ ಅವರು ಆದಷ್ಟು ಬೇಗ ಕಾಮಗಾರಿಯನ್ನು ಫೆಬ್ರವರಿ ತಿಂಗಳ ಒಳಗೆ ಪೂರ್ಣಗೊಳಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರನ್ನು ಮತ್ತೊಮ್ಮೆ ಕ್ಷೇತ್ರಕ್ಕೆ ಕರೆತಂದು ಉದ್ಘಾಟನೆ ಮಾಡಿಸಿ ಭಕ್ತರ ದರ್ಶನಕ್ಕೆ ಅನುಕೂಲ ಮಾಡಿಕೊಡೋಣ ಎಂದು ತಿಳಿಸಿದರು.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…