ಚಾಮರಾಜನಗರ:ದೇಶದ ೭೫ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಜಾಹೀರಾತಿಗೆ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರ ಒಂದು ಜಾಹೀರಾತು ಹೊರಡಿಸಿದ್ದು ಈ ದೇಶದ ಪ್ರಥಮ ಪ್ರಧಾನ ಮಂತ್ರಿ ಜವಾಹರ್ ಲಾಲ್ ನೆಹರು, ಪ್ರಥಮ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಹಾಗೂ ಕೆಚ್ಚೆದೆಯ ಹೋರಾಟಗಾರ ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಟಿಪ್ಪು ಸುಲ್ತಾನ್ ಅವರ ಭಾವಚಿತ್ರವನ್ನು ಜಾಹೀರಾತಿನಲ್ಲಿ ಕೈಬಿಟ್ಟಿರುವುದರ ಕುರಿತು ಆಕ್ರೋಶ ವ್ಯಕ್ತಪಡಿಸಿದರು.
ಇಂತಹ ಜಾಹೀರಾತುಗಳು ಪಕ್ಷದ ಜಾಹೀರಾತುಗಳಂತೆ ಕಾಣಿಸುತ್ತಿದೆ ಇದು ಅತ್ಯಂತ ಕೆಟ್ಟ ರಾಜಕಾರಣವಾಗಿದೆಯೇ ಹೊರತು ಇದರಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಗೆ ಕೆಟ್ಟ ಹೆಸರು ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.