ಜಿಲ್ಲೆಗಳು

ವಾಲ್ಮೀಕಿ ಜಯಂತಿ ಸಂಭ್ರಮ ಹೆಚ್ಚಿಸಿದ ಮೀಸಲು ಹೆಚ್ಚಳ

ಮೈಸೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜನಾಂಗಕ್ಕೆ ಮೀಸಲು ಹೆಚ್ಚಿಸುವ ಸರಕಾರದ ನಿರ್ಧಾರ ಈ ಸಮುದಾಯದಲ್ಲಿ ಹರ್ಷ ಮೂಡಿಸಿದೆ. ಭಾನುವಾರ ಮೈಸೂರಿನ ಕಲಾಮಂದಿರದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಈ ಸಂತಸ ಸ್ಪಷ್ಟವಾಗಿ ಕಾಣುತ್ತಿತ್ತು.

ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆ ಮತ್ತು ನಗರ ಮತ್ತು ತಾಲ್ಲೂಕು ನಾಯಕ ಸಮಾಜಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಜಗತ್ತಿಗೆ ರಾಮಾಯಣದಂತಹ ಮಹಾಕಾವ್ಯವನ್ನು ನೀಡಿ ಸಮಾಜದ ಪರಿವರ್ತನೆಗೆ ಕಾರಣವಾಗಿರುವ ವಾಲ್ಮೀಕಿ ಜೀವನದ ಆದರ್ಶವನ್ನು ಇಂದಿನ ಯುವ ಜನತೆ ಅರಿತುಕೊಳ್ಳಬೇಕು. ಅವರ ಆದರ್ಶಗಳು ಅನುಕರಣೀಯ ಎಂದರು.

ವಾಲ್ಮೀಕಿ ಮಹರ್ಷಿ ಜೀವನದ ವಿಚಾರಧಾರೆ ತಿಳಿಸುವ ಕೆಲಸ ಮಾಡಬೇಕು. ಅವಕಾಶವಿಲ್ಲದೆ ಅನಕ್ಷರಸ್ಥ ಸಮಾಜಗಳು ಇಂದು ಶಿಕ್ಷಣ ಪಡೆಯುವ ಜತೆಗೆ ನೂರರಷ್ಟು ಅಂಕಗಳನ್ನು ಪಡೆಯುತ್ತಿರುವ ಮಟ್ಟಿಗೆ ಬಂದಿರುವುದು ದೊಡ್ಡ ಸಾಧನೆಯಾಗಿದೆ ಎಂದು ಶಾಸಕ ತನ್ವೀರ್ಸೇಠ್ ಅಭಿಪ್ರಾಯಪಟ್ಟರು.

ಬಿಜೆಪಿ ಸರಕಾರ ತಳ ಸಮುದಾಯದ ಪರವಾಗಿದೆ. ಸಾಮಾನ್ಯ ವರ್ಗದಲ್ಲಿ ಹಲವು ಸದಸ್ಯರಿದ್ದರೂ ನಾಯಕ ಸಮಾಜಕ್ಕೆ ಅವಕಾಶ ಮಾಡಿಕೊಡಬೇಕು ಎನ್ನುವ ಕಾರಣಕ್ಕಾಗಿ ಶಿವಕುಮಾರ್ ಅವರನ್ನು ಮಹಾಪೌರರನ್ನಾಗಿ ಮಾಡಲಾಯಿತು. ಒಬ್ಬ ಆದಿವಾಸಿ ಸಮಾಜಕ್ಕೆ ಸೇರಿದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಲಾಯಿತು ಎಂದು ಶಾಸಕ ಎಲ್.ನಾಗೇಂದ್ರ ಹೇಳಿದರು.

ಮಹಾಪೌರ ಶಿವಕುಮಾರ್ ಮಾತನಾಡಿ, ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡಬೇಕೆಂದು ಸ್ವಾಮೀಜಿ ನಡೆಸಿದ ಹೋರಾಟಕ್ಕೆ ಸರ್ಕಾರ ಕೊನೆಗೂ ಸ್ಪಂದಿಸಿದೆ. ಶೇ. 3ರಿಂದ 7ಕ್ಕೆ ಜಾಸ್ತಿ ಮಾಡಿರುವುದರಿಂದ ಈ ಸಮುದಾಯದ ಬೆಳವಣಿಗೆಗೆ ಅನುಕೂಲವಾಗಿದೆ. 30 ವರ್ಷಗಳ ಕಾಲದಿಂದಲೂ ನೆನಗುದಿಗೆ ಬಿದ್ದಿದ್ದ ತಳವಾರ ಮತ್ತು ಪರಿವಾರವನ್ನು ಎಸ್ಟಿಗೆ ಸೇರಿಸಿದ್ದು, ಬಿಜೆಪಿ ಸರ್ಕಾರ ಎಂಬುದು ಸಂತೋಷದ ವಿಚಾರ ಎಂದು ಹೇಳಿದರು.

ಸಹಾಯಕ ಪ್ರಾಧ್ಯಾಪಕ ಹರದನಹಳ್ಳಿ ಬಿ.ನಂಜುಂಡಸ್ವಾಮಿ ವಾಲ್ಮೀಕಿ ಕುರಿತು ಉಪನ್ಯಾಸ ನೀಡಿದರು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಅಂಕ ಪಡೆದ ವಿದ್ಯಾರ್ಥಿನಿ ಚಾರುಕೀರ್ತಿಯನ್ನು ಸನ್ಮಾನಿಸಿ ಒಂದು ಲಕ್ಷ ರೂ. ಪ್ರೋತ್ಸಾಹಧನದ ಚೆಕ್ ಅನ್ನು ವಿತರಿಸಲಾಯಿತು.

ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಮೈಲ್ಯಾಕ್ ಅಧ್ಯಕ್ಷ ಆರ್.ರಘು, ಉಪ ಮಹಾಪೌರರಾದ ಡಾ.ಜಿ.ರೂಪಾ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಪಂ ಉಪ ಕಾರ್ಯದರ್ಶಿ ಎಂ.ಪ್ರೇಮ್ ಕುಮಾರ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಯೋಜನಾ ಸಮನ್ವಯ ಅಧಿಕಾರಿ ಬಿ.ಎಸ್.ಪ್ರಭಾ ಅರಸ್, ನಗರಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಹಾಜರಿದ್ದರು.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

32 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago