ಜಿಲ್ಲೆಗಳು

ಹನೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಹನೂರು: ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಅಂತಹ ಮಹನೀಯರ ಜಯಂತಿ ಆಚರಣೆ ಮಾಡುತ್ತಿರುವ ನಾವೇ ಅದೃಷ್ಟವಂತರು ಎಂದು ಬಿಜೆಪಿ ಒಬಿಸಿ ಜಿಲ್ಲಾ ಸಂಚಾಲಕ ಬಿ.ವೆಂಕಟೇಶ್ ಅಭಿಪ್ರಾಯಪಟ್ಟರು.

ತಾಲೂಕಿನ ಚಂಗವಾಡಿ ಗ್ರಾಮದಲ್ಲಿ ನಾಯಕ ಜನಾಂಗದ ವತಿಯಿಂದ ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಯುವಕರ ಸಂಘದ ನಾಮಫಲಕ ಅನಾವರಣಗೊಳಿಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹರ್ಷಿಗಳ ತತ್ವ ಆದರ್ಶಗಳು ಅನುಕರಣೀಯ. ಸಮುದಾಯದ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು. ಉನ್ನತ ಶಿಕ್ಷಣ ಹಾಗೂ ಐಎಎಸ್, ಕೆಎಎಸ್ ವಿದ್ಯಾಭ್ಯಾಸ ಮಾಡುವವರು ಇದ್ದರೆ ಅಂತಹವರಿಗೆ ನಾವು ಸಹಕಾರವನ್ನು ನೀಡುತ್ತೇವೆ. ಪ್ರಸ್ತುತ 21ನೇ ಶತಮಾನದಲ್ಲಿ ಕೂಡ ನಮ್ಮ ಮೂಲಭೂತ ಸೌಕರ್ಯಗಳನ್ನು ಪಡೆಯಲು ಹೋರಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜನತೆ ರಾಜಕೀಯಕ್ಕೆ ಕೊಡುವ ಒತ್ತನ್ನು ಅಭಿವೃದ್ಧಿಗೆ ಕೊಡಬೇಕು. ಕ್ಷೇತ್ರದ ಗೋಪಿನಾಥಮ್, ಮ.ಮ.ಬೆಟ್ಟ ಜನತೆ ಅದರಲ್ಲೂ ಗರ್ಭಿಣಿಯರು ಸ್ಕ್ಯಾನಿಂಗ್ ಮಾಡಿಸಲು 120 ಕಿ.ಮೀ.ಅಂತರ ಹೋಗಬೇಕಾದ ದುಃಸ್ಥಿತಿ ಎದುರಾಗಿದೆ. ಇದೇ ರೀತಿ ಡಯಾಲಿಸಸ್, ಉತ್ತಮ ವೈದ್ಯಕೀಯ ಸೇವೆ ಪಡೆಯಲು ನೂರಾರು ಕಿ.ಮೀ. ತೆರಳಬೇಕಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರು ಮತ್ತು ಚಾಮರಾಜನಗರ ನಾಯಕ ಸಂಘದ ಅಧ್ಯಕ್ಷರಾದ ಕೆಲ್ಲಂಬಳ್ಳಿ ಸೋಮನಾಯಕ ನೆರವೇರಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಪರಿಹಾರ ನಿಧಿ ಮಾಜಿ ಅಧ್ಯಕ್ಷರಾದ ರಾಮಚಂದ್ರ, ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಜಯಸುಂದರ, ಶ್ರೀನಿವಾಸನಾಯಕ, ಮಂಜುನಾಥ್, ವೆಂಕಟೇಶ್, ಚಿಕ್ಕಮಾದ ನಾಯಕ, ಶಾಂತಮೂರ್ತಿ, ಸದಸ್ಯರಾದ ರಾಧಾ, ಮಾದಪ್ಪ, ಪ್ರಸಾದ್, ಬಾಲು, ತಿರುಪತಿ, ರಾಚಪ್ಪ, ಮಣಿ ಸೇರಿದಂತೆ ನಾಯಕ ಸಮುದಾಯದ ಮುಖಂಡರು, ಯಜಮಾನರುಗಳು, ಯುವಕರು, ಸಾರ್ವಜನಿಕರು ಉಪಸ್ಥಿತರಿದ್ದರು.

andolanait

Recent Posts

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

56 mins ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

1 hour ago

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

1 hour ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

1 hour ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

1 hour ago