Mysore
14
broken clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ವಾಲ್ಮೀಕಿ ಜಯಂತಿಗೆ ಶಾಸಕ ಆರ್. ನರೇಂದ್ರ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಹನೂರು: ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವ ಭಾವಿ ಸಭೆಯನ್ನು ಶಾಸಕ ಆರ್. ನರೇಂದ್ರ ನೇತೃತ್ವದಲ್ಲಿ ಜರುಗಿತು.

ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಮುಖಂಡರುಗಳ ಅಭಿಪ್ರಾಯವನ್ನು ಕೇಳಲಾಯಿತು. ವಾಲ್ಮೀಕಿ ಸಮುದಾಯದ ಮುಖಂಡರುಗಳು, ಸರ್ಕಾರದಿಂದ ಆಚರಿಸಲಾಗುವ ವಾಲ್ಮೀಕಿ ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕೆಂದು ನಿರಂತರ ಧರಣಿ ನಡೆಸುತ್ತಿರುವ ಶ್ರೀ ಪ್ರಸನ್ನಂದಾಪುರಿ ಸ್ವಾಮೀಜಿ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದೆ ಅಗೌರವ ತೋರಿದೆ ಈ ಹಿನ್ನಲೆಯಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುವ ಜಯಂತಿಯನ್ನು ಬಹಿಷ್ಕರಿಸಿದ್ದೇವೆ ಎಂದರು.

ಶಾಸಕ ಆರ್. ನರೇಂದ್ರ ಅವರು ಮಾತನಾಡಿ, ಸರ್ಕಾರದ ಆದೇಶ ಹಾಗೂ ನಿರ್ದೇಶನದಂತೆ ನಾವು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಧಿಕಾರಿಗಳ ಜೊತೆಗೂಡಿ ಸರಳವಾಗಿಯಾದರು ಆಚರಿಸಿ ಮಹರ್ಷಿಗಳಿಗೆ ಗೌರವ ಸೂಚಿಸಲಾಹುವುದು,ಇದೇ ತಿಂಗಳ ಏಳನೇ ತಾರೀಕಿನಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಯಲ್ಲಿ ತೀರ್ಮಾನದ ನಂತರ ನೀವು ನೀಡುವ ಅಭಿಪ್ರಾಯದ ನಂತರ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಸಿಲ್ದಾರ ಆನಂದಯ್ಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್’ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್ ಮಠದ್,ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ದೈಹಿಕ ಪರಿವೀಕ್ಷಕ ಮಹದೇವ್,ಪ ಪಂ ಆರೋಗ್ಯ ನಿರೀಕ್ಷಕ ಬಾಲಸುಬ್ರಮಣ್ಯ, ಎಎಸ್ ಐ ಕೃಷ್ಣ,ಕಂದಾಯ ನಿರೀಕ್ಷಕ ಮಹದೇವಸ್ವಾಮಿ ಗ್ರಾಮ ಲೆಕ್ಕಿಗ ಶೇಷಣ್ಣ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಾಲ್ಮೀಕಿ ಸಮುದಾಯದ ವಿವಿಧ ಗ್ರಾಮಗಳ ಮುಖಂಡರುಗಳು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!