ಮೈಸೂರು : ಗಾಯಿತ್ರಿ ಎಂಟರ್ ಪ್ರೈಸಸ್ ಹಾಗೂ ಕನ್ನಡ ಸಾಹಿತ್ಯ ಕಲಾಕೂಟ ಮೈಸೂರು ಇವರುಗಳ ವತಿಯಿಂದ ಹಿರಿಯ ಕಲಾವಿದರೂ ಹಾಗೂ ಛಾಯಾಚಿತ್ರ ಪತ್ರಕರ್ತರೂ ಆದ ಎಸ್. ಎಂ. ಜಂಬುಕೇಶ್ವರ ಅವರು ರಚಿಸಿರುವ ʼವರ್ಣದಿಂದ ವಿಶ್ವದೆಡೆಗೆʼ ಕೃತಿಯನ್ನು ಆ. 12 ರಂದು ( ಶುಕ್ರವಾರ) ಲೋಕಾರ್ಪಣೆ ಮಅಡಲಾಗುತ್ತಿದೆ.
ಕೃತಿ ಬಿಡುಗಡೆ ಕಾರ್ಯಕ್ರಮವು ನಗರದ ಜೆ ಎಸ್ ಎಸ್ ಆಸ್ಪತ್ರೆಯ ಆವರಣದಲ್ಲಿರುವ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಭವನದಲ್ಲಿ ಸಂಜೆ 6 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ʼವರ್ಣದಿಂದ ವಿಶ್ವದೆಡೆಗೆʼ ಕೃತಿಯು ಸುತ್ತೂರು ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ಅವರು ಬಿಡುಗಡೆಗೊಳಿಸಲಿದ್ದಾರೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರು ಹಾಗೂ ಮಾಜಿ ಸಚಿವರಾದ ಜಿ.ಟಿ,ದೇವೇಗೌಡ ರವರು ವಹಿಸಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಡಾ. ಎಂ. ಮಹ್ಮದ್ ಭಾಷ ರವರು ಕೃತಿ ಪರಿಚಯ ಮಾಡಲಿದ್ದಾರೆ.ಪ್ರಾಸ್ತಾವಿಕ ನುಡಿಗಳನ್ನು ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷರಾದ ಎಂ.ಚಂದ್ರಶೇಖರ್ ಅವರು ಆಡಲಿದ್ದಾರೆ.
ಅಂದಿನ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಭಿಮಾನಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಾಶಕರಾದ ಎಂ.ಎನ್. ಕಾರ್ತಿಕ್ ಅವರು ತಿಳಿಸಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…