Mysore
27
light rain

Social Media

ಶನಿವಾರ, 19 ಅಕ್ಟೋಬರ್ 2024
Light
Dark

ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಬಿಡುಗಡೆ

ಮೈಸೂರು: ವೀರಪ್ಪನ್ ಸಹಚರ, ಪಾಲಾರ್ ಬಾಂಬ್ ಸ್ಟೋಟದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಜ್ಞಾನಪ್ರಕಾಶ್ ಅವರನ್ನು ಅನಾರೋಗ್ಯ ಕಾರಣದಿಂದ ಜಾಮೀನ ಮೇಲೆ ಮಂಗಳವಾರ ಬಿಡುಗಡೆ ಮಾಡಲಾಗಿದೆ.

ಮೈಸೂರು ಕೇಂದ್ರ ಕಾರಾಗೃಹದಲ್ಲಿ ಇದ್ದ ಇವರು ಶ್ವಾಸಕೋಶದ ಕ್ಯಾನ್ಸರ್ ಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಾನವೀಯತೆಯ ಆಧಾರದ ಮೇಲೆ ನ.26 ರಂದು ಜಾಮೀನು ನೀಡಿತ್ತು. ಆ ನಂತರ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ ಅವರನ್ನು ಮೈಸೂರು ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ‌.

ಪಾಲಾರ್ ಬಾಂಬ್ ಸ್ಫೋಟ ಪ್ರಕರಣ

ಪಾಲಾರ್, ಮಹದೇಶ್ವರ ಬೆಟ್ಟಕ್ಕೆ ಹೊಂದಿಕೊಂಡಿರುವ ಗ್ರಾಮ. ಇದರ ಸುತ್ತಮುತ್ತ ಸುಮಾರು 50 ಕಿ.ಮೀ. ವ್ಯಾಪ್ತಿಯಲ್ಲಿ ವೀರಪ್ಪನ್ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡಿದ್ದ. 1993 ರ ಏಪ್ರಿಲ್ 9 ರಂದು ತಮಿಳುನಾಡಿನ ಅಂದಿನ ಎಸ್‌ಟಿಎಫ್ ಮುಖ್ಯಸ್ಥರಾಗಿದ್ದ ಗೋಪಾಲಕೃಷ್ಣ ಮತ್ತು ಅವರ ತಂಡದ ಮೇಲೆ ವೀರಪ್ಪನ್ ಸಹಚರರು ದಾಳಿ ನಡೆಸಲು ಸಂಚು ರೂಪಿಸಿದ್ದರು. ಸಾಕಷ್ಟು ಬಾಂಬ್‌ಗಳನ್ನು ಸಂಗ್ರಹಿಸಿಟ್ಟಿದ್ದ ವೀರಪ್ಪನ್ ಸಹಚರರು ಪಾಲಾರ್ ಸಮೀಪದ ಸೊರೆಕಾಯಿಪಟ್ಟಿ ಬಳಿ ನೆಲಬಾಂಬ್ ಹೂತಿಟ್ಟಿದ್ದರು.

ಗೋಪಾಲ್‌ಕೃಷ್ಣ ಅವರನ್ನು ಒಳಗೊಂಡ ವಿಶೇಷ ತಂಡ ಮಾಹಿತಿದಾರರ ಜೊತೆ ತಮಿಳುನಾಡು ಗಡಿ ಭಾಗದಲ್ಲಿರುವ ಪಾಲಾರ್‌ನತ್ತ ಹೊರಟಿತು. ಸೈಮನ್ ಸಿಡಿಸಿದ ನೆಲಬಾಂಬ್‌ನಿಂದ 22 ಮಂದಿ ಮೃತಪಟ್ಟು,  ಹಲವಾರು ಮಂದಿ ಗಾಯಗೊಂಡಿದ್ದರು.

ಘಟನೆ ನಂತರ ವೀರಪ್ಪನ್ ಸೇರಿದಂತೆ 124 ಮಂದಿ ಸಹಚರರ ವಿರುದ್ಧ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಲಾಗಿತ್ತು. ಅಂದಿನ ಎಸ್‌ಟಿಎಫ್ ಮುಖ್ಯಸ್ಥರಾಗಿದ್ದ ಶಂಕರ ಬಿದರಿ ಅವರು ವೀರಪ್ಪನ್ ಸೆರೆಗಾಗಿ ತಮ್ಮ ತಂಡದೊಂದಿಗೆ ಮಲೈ ಮಹದೇಶ್ವರ ಬೆಟ್ಟದ ಸುತ್ತ ಕಾರ್ಯಾಚರಣೆ ತೀವ್ರಗೊಳಿಸಿ, ಮೂರು ತಿಂಗಳ ಬಳಿಕ ವೀರಪ್ಪನ್ ಸಹಚರರಾದ ಮೀಸೆಕಾರ ಮಾದಯ್ಯ, ಜ್ಞಾನ ಪ್ರಕಾಶ್, ಸೈಮನ್ ಮತ್ತು ಬಿಲವೇಂದ್ರನ್ ಅವರನ್ನು ಬಂಧಿಸಲಾಗಿತ್ತು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ