ಮೈಸೂರು: ವೀರಪ್ಪನ್ ಸಹಚರ, ಪಾಲಾರ್ ಬಾಂಬ್ ಸ್ಟೋಟದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಜ್ಞಾನಪ್ರಕಾಶ್ ಅವರನ್ನು ಅನಾರೋಗ್ಯ ಕಾರಣದಿಂದ ಜಾಮೀನ ಮೇಲೆ ಮಂಗಳವಾರ ಬಿಡುಗಡೆ ಮಾಡಲಾಗಿದೆ.
ಮೈಸೂರು ಕೇಂದ್ರ ಕಾರಾಗೃಹದಲ್ಲಿ ಇದ್ದ ಇವರು ಶ್ವಾಸಕೋಶದ ಕ್ಯಾನ್ಸರ್ ಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಾನವೀಯತೆಯ ಆಧಾರದ ಮೇಲೆ ನ.26 ರಂದು ಜಾಮೀನು ನೀಡಿತ್ತು. ಆ ನಂತರ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ ಅವರನ್ನು ಮೈಸೂರು ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ.
ಪಾಲಾರ್ ಬಾಂಬ್ ಸ್ಫೋಟ ಪ್ರಕರಣ
ಪಾಲಾರ್, ಮಹದೇಶ್ವರ ಬೆಟ್ಟಕ್ಕೆ ಹೊಂದಿಕೊಂಡಿರುವ ಗ್ರಾಮ. ಇದರ ಸುತ್ತಮುತ್ತ ಸುಮಾರು 50 ಕಿ.ಮೀ. ವ್ಯಾಪ್ತಿಯಲ್ಲಿ ವೀರಪ್ಪನ್ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡಿದ್ದ. 1993 ರ ಏಪ್ರಿಲ್ 9 ರಂದು ತಮಿಳುನಾಡಿನ ಅಂದಿನ ಎಸ್‌ಟಿಎಫ್ ಮುಖ್ಯಸ್ಥರಾಗಿದ್ದ ಗೋಪಾಲಕೃಷ್ಣ ಮತ್ತು ಅವರ ತಂಡದ ಮೇಲೆ ವೀರಪ್ಪನ್ ಸಹಚರರು ದಾಳಿ ನಡೆಸಲು ಸಂಚು ರೂಪಿಸಿದ್ದರು. ಸಾಕಷ್ಟು ಬಾಂಬ್‌ಗಳನ್ನು ಸಂಗ್ರಹಿಸಿಟ್ಟಿದ್ದ ವೀರಪ್ಪನ್ ಸಹಚರರು ಪಾಲಾರ್ ಸಮೀಪದ ಸೊರೆಕಾಯಿಪಟ್ಟಿ ಬಳಿ ನೆಲಬಾಂಬ್ ಹೂತಿಟ್ಟಿದ್ದರು.
ಗೋಪಾಲ್‌ಕೃಷ್ಣ ಅವರನ್ನು ಒಳಗೊಂಡ ವಿಶೇಷ ತಂಡ ಮಾಹಿತಿದಾರರ ಜೊತೆ ತಮಿಳುನಾಡು ಗಡಿ ಭಾಗದಲ್ಲಿರುವ ಪಾಲಾರ್‌ನತ್ತ ಹೊರಟಿತು. ಸೈಮನ್ ಸಿಡಿಸಿದ ನೆಲಬಾಂಬ್‌ನಿಂದ 22 ಮಂದಿ ಮೃತಪಟ್ಟು, ಹಲವಾರು ಮಂದಿ ಗಾಯಗೊಂಡಿದ್ದರು.
ಘಟನೆ ನಂತರ ವೀರಪ್ಪನ್ ಸೇರಿದಂತೆ 124 ಮಂದಿ ಸಹಚರರ ವಿರುದ್ಧ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಲಾಗಿತ್ತು. ಅಂದಿನ ಎಸ್‌ಟಿಎಫ್ ಮುಖ್ಯಸ್ಥರಾಗಿದ್ದ ಶಂಕರ ಬಿದರಿ ಅವರು ವೀರಪ್ಪನ್ ಸೆರೆಗಾಗಿ ತಮ್ಮ ತಂಡದೊಂದಿಗೆ ಮಲೈ ಮಹದೇಶ್ವರ ಬೆಟ್ಟದ ಸುತ್ತ ಕಾರ್ಯಾಚರಣೆ ತೀವ್ರಗೊಳಿಸಿ, ಮೂರು ತಿಂಗಳ ಬಳಿಕ ವೀರಪ್ಪನ್ ಸಹಚರರಾದ ಮೀಸೆಕಾರ ಮಾದಯ್ಯ, ಜ್ಞಾನ ಪ್ರಕಾಶ್, ಸೈಮನ್ ಮತ್ತು ಬಿಲವೇಂದ್ರನ್ ಅವರನ್ನು ಬಂಧಿಸಲಾಗಿತ್ತು.
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…
ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…
ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…
ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…