ಜಿಲ್ಲೆಗಳು

ಗ್ರಾಮೀಣ ಪಡಿತರದಾರರಿಗೆ 3 ಲೀ.ಸೀಮೆಣ್ಣೆ ವಿತರಿಸಿ

 ಕದಸಂಸ ಮುಖಂಡ ದೊಡ್ಡಿಂದುವಾಡಿ ಸಿದ್ದರಾಜು ಆಗ್ರಹ

ಚಾಮರಾಜನಗರ: ಪಟ್ಟಣದ ಬಿ.ಪಿ.ಎಲ್ ಪಡಿತರದಾರರಿಗೆ ಸೀಮೆಎಣ್ಣೆ ವಿತರಿಸಬೇಕು ಹಾಗೂ ಗ್ರಾಮೀಣ ಬಿ.ಪಿ.ಎಲ್ ಪಡಿತರದಾರರಿಗೆ ಸೀಮೆಎಣ್ಣೆ ಹಂಚಿಕೆ ಹೆಚ್ಚಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮೈಸೂರು ವಿಭಾಗೀಯ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಬಿ.ಜೆ.ಪಿ. ನೇತೃತ್ವದ ಸರ್ಕಾರ ಅಧಿಕಾರ ಹಿಡಿದ ಬಳಿಕ ೨೦೧೬ರ ಸೆಪ್ಟೆಂಬರ್‌ನಿoದ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ವಿತರಿಸುತ್ತಿದ್ದ ೫ ಲೀ.ಸೀಮೆಎಣ್ಣೆಯನ್ನು 2 ಲೀ.ಗೆ ಕಡಿತಗೊಳಿಸದೆ. ಪಟ್ಟಣ ಪ್ರದೇಶಗಳ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ವಿತರಣೆಯನ್ನೇ ನಿಲ್ಲಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.
೨೦೨೦ರ ಅಕ್ಟೋಬರ್‌ನಿಂದ ಗ್ರಾಮಾಂತರ ಪ್ರದೇಶಗಳ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ವಿತರಿಸುವ ಪ್ರಮಾಣವನ್ನು ೨ ಲೀಟರ್‌ಗೆ ಕಡಿತ ಮಾಡಿದೆ. ಇದನ್ನು ಪ್ರಶ್ನಿಸಿ ಬಿ.ಪಿ.ಎಲ್ ಪಡಿತರ ಚೀಟಿದಾರರು ಹೈಕೋರ್ಟ್ನಲ್ಲಿ ಪಿ.ಐ.ಎಲ್ ಹಾಕಲಾಗಿತ್ತು. ಗ್ರಾಮಾಂತರ ಪಡಿತರ ಚೀಟಿದಾರರಿಗೆ ಹಿಂದಿನ ಆದೇಶದ ಪ್ರಕಾರ ೩ ಲೀ. ಸೀಮೆಣ್ಣೆ ವಿತರಿಸುವಂತೆ ಹೈಕೋರ್ಟ್ ಆದೇಶಿಸಿದ್ದರೂ ರಾಜ್ಯ ಸರ್ಕಾರ ಉಲ್ಲಂಘಿಸಿದೆ. ೨೦೨೨ರ ಏಪ್ರಿಲ್‌ನಿಂದ ವಿತರಣೆ ಪ್ರಮಾಣವನ್ನು ಕಡಿತಗೊಳಿಸಿ ೧.೫ ಲೀ.ನಂತೆ ವಿತರಿಸುತ್ತಿದೆ ಎಂದು ದೂರಿದರು.
ನಿರಂತರ ವಿದ್ಯುತ್ ಕಡಿತದ ಸಮಸ್ಯೆಯನ್ನು ಎದುರಿಸುತ್ತಿರುವ ಗ್ರಾಮೀಣ ಜನರಿಗೆ ದೀಪ ಉರಿಸಲು ಸೀಮೆಣ್ಣೆ ಇಲ್ಲದಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮೇಲೆ ಪರಿಣಾಮ ಬೀರಲಿದೆ. ಜಿಲ್ಲೆಯನ್ನು ಬೆಟ್ಟಗುಡ್ಡ ಪ್ರದೇಶವೆಂದು ಪರಿಗಣಿಸಿ ಪ್ರತಿ ತಿಂಗಳು ೫ ಲೀ.ನಂತೆ ಸೀಮೆಎಣ್ಣೆ ವಿತರಿಸಬೇಕೆಂದು ಆಗ್ರಹಿಸಿದರು.
ಸಗಟು ಸೀಮೆಎಣ್ಣೆ ವಿತರಕರಿಗೆ ಆಯಿಲ್ ಕಂಪನಿಯವರು ಪ್ರತಿ ೧೨ ಸಾವಿರ ಲೀ.ಲೋಡಿಗೆ ಹೆಚ್ಚುವರಿಯಾಗಿ ೬ ಲಕ್ಷ ರೂ ಪಡೆಯುತ್ತಾರೆ. ೧-೨ ತಿಂಗಳ ಬಳಿಕ ಅವರಿಗೆ ರಾಜ್ಯ ಸರ್ಕಾರದಿಂದ ಹಣ ಪಾವತಿಯಾಗುತ್ತಿದೆ. ಆದ್ದರಿಂದ ಅವರು ಪ್ರತಿ ತಿಂಗಳು ಸೀಮೆಎಣ್ಣೆ ಎತ್ತುವಳಿ ಮಾಡಿ ವಿತರಿಸುತ್ತಿಲ್ಲ. ಈ ಸಮಸ್ಯೆಯನ್ನು ಪರಿಹರಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ಗೋಷ್ಠಿಯಲ್ಲಿ ಮುಖಂಡರಾದ ಸಿ.ಎಂ.ಕೃಷ್ಣಮೂರ್ತಿ, ಮಹದೇವಸ್ವಾಮಿ, ಕೆ.ನಾಗರಾಜು, ಧನಂಜಯ್, ಹಿಂಡಯ್ಯ ಹಾಜರಿದ್ದರು.

andolanait

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

4 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

4 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

4 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

5 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

5 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

5 hours ago