ಜಿಲ್ಲೆಗಳು

ವಿರಾಜಪೇಟೆ : ಹುಟ್ಟುಹಬ್ಬ ಆಚರಿಸಿ ಮಲಗಿದ ವ್ಯಕ್ತಿ, ಹೊರಳಿದ್ದು ಸಾವಿನತ್ತ!

ವಿರಾಜಪೇಟೆ: ಹುಟ್ಟು ಹಬ್ಬವನ್ನು ಆಚರಿಸಿ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿ ಬೆಳಿಗ್ಗೆ ಮೃತನಾಗಿ ಪತ್ತೆಯಾದ ಘಟನೆ ನಗರದ ಹೃದಯ ಭಾಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದ ನಿವಾಸಿ ಕೊಡಗು ಡಿ.ಸಿ.ಸಿ. ಬ್ಯಾಂಕ್‌ನ ಅಧ್ಯಕ್ಷರ ವಾಹನ ಚಾಲಕರಾಗಿ ಸೇವೆ ಸಲ್ಲಿಸುತಿದ್ದ ವಿನಯ್ ಕುಮಾರ್ ಯೆಂಡಿಗೇರಿ(೩೦) ಮೃತ ದುರ್ದೈವಿ.
ಮೃತ ವ್ಯಕ್ತಿಯು ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದಿಂದ ಕೊಡಗು ಜಿಲ್ಲೆಯ ಕೊಡಗು ಡಿ.ಸಿ.ಸಿ ಬ್ಯಾಂಕ್ ನ ಕಾರು ಚಾಲಕನಾಗಿ ನೇಮಕಗೊಂಡಿದ್ದರು. ಸುಮಾರು ೧೮ ತಿಂಗಳುಗಳಿಂದ ಬ್ಯಾಂಕ್ ಅಧ್ಯಕ್ಷರ ಕಾರು ಚಾಲಕನಾಗಿ ಸೇವೆ ಸಲ್ಲಿಸುತಿದ್ದರು. ಮೇ ತಿಂಗಳಲ್ಲಿ ಮೃತರು ವಿವಾಹವಾಗಿದ್ದರು.

ಸೆ.೫ರಂದು ಬೆಳಿಗ್ಗೆ ಮಡಿಕೇರಿಗೆ ತೆರಳಿ ಸಂಜೆ ೯ ಗಂಟೆಗೆ ವಿರಾಜಪೇಟೆಗೆ ಆಗಮಿಸಿದ್ದಾರೆ. ವಿರಾಜಪೇಟೆ ಡಿ.ಸಿ.ಸಿ. ಬ್ಯಾಂಕ್‌ನ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದ ವಿನಯ್, ಮಂಗಳವಾರ ಬೆಳಿಗ್ಗೆ ೯.೩೦ ಗಂಟೆಯಾದರೂ ಹೊರ ಬಂದಿರಲಿಲ್ಲ. ವಿರಾಜಪೇಟೆ ಡಿ.ಸಿ.ಸಿ. ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಸುಬ್ಬಯ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬೀಗ ಒಡೆದು ಒಳ ಪ್ರವೇಶ ಮಾಡಿದ ಪೊಲೀಸರಿಗೆ ಕೋಣೆಯಲ್ಲಿ ಅಂಗಾತವಾಗಿ ಬಿದ್ದಿರುವಂತೆ ವಿನಯ್ ಅವರ ಮೃತದೇಹ ಪತ್ತೆಯಾಗಿದೆ. ಬ್ಯಾಂಕ್ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ಸ್ವಗೃಹವಾದ ಗದಗ ಜಿಲ್ಲೆಗೆ ರವಾನಿಸಲಾಯಿತು.

andolanait

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

8 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

9 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

9 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

10 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

10 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

10 hours ago