ವಿರಾಜಪೇಟೆ: ಹುಟ್ಟು ಹಬ್ಬವನ್ನು ಆಚರಿಸಿ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿ ಬೆಳಿಗ್ಗೆ ಮೃತನಾಗಿ ಪತ್ತೆಯಾದ ಘಟನೆ ನಗರದ ಹೃದಯ ಭಾಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದ ನಿವಾಸಿ ಕೊಡಗು ಡಿ.ಸಿ.ಸಿ. ಬ್ಯಾಂಕ್‌ನ ಅಧ್ಯಕ್ಷರ ವಾಹನ ಚಾಲಕರಾಗಿ ಸೇವೆ ಸಲ್ಲಿಸುತಿದ್ದ ವಿನಯ್ ಕುಮಾರ್ ಯೆಂಡಿಗೇರಿ(೩೦) ಮೃತ ದುರ್ದೈವಿ.
ಮೃತ ವ್ಯಕ್ತಿಯು ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದಿಂದ ಕೊಡಗು ಜಿಲ್ಲೆಯ ಕೊಡಗು ಡಿ.ಸಿ.ಸಿ ಬ್ಯಾಂಕ್ ನ ಕಾರು ಚಾಲಕನಾಗಿ ನೇಮಕಗೊಂಡಿದ್ದರು. ಸುಮಾರು ೧೮ ತಿಂಗಳುಗಳಿಂದ ಬ್ಯಾಂಕ್ ಅಧ್ಯಕ್ಷರ ಕಾರು ಚಾಲಕನಾಗಿ ಸೇವೆ ಸಲ್ಲಿಸುತಿದ್ದರು. ಮೇ ತಿಂಗಳಲ್ಲಿ ಮೃತರು ವಿವಾಹವಾಗಿದ್ದರು.
ಸೆ.೫ರಂದು ಬೆಳಿಗ್ಗೆ ಮಡಿಕೇರಿಗೆ ತೆರಳಿ ಸಂಜೆ ೯ ಗಂಟೆಗೆ ವಿರಾಜಪೇಟೆಗೆ ಆಗಮಿಸಿದ್ದಾರೆ. ವಿರಾಜಪೇಟೆ ಡಿ.ಸಿ.ಸಿ. ಬ್ಯಾಂಕ್‌ನ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದ ವಿನಯ್, ಮಂಗಳವಾರ ಬೆಳಿಗ್ಗೆ ೯.೩೦ ಗಂಟೆಯಾದರೂ ಹೊರ ಬಂದಿರಲಿಲ್ಲ. ವಿರಾಜಪೇಟೆ ಡಿ.ಸಿ.ಸಿ. ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಸುಬ್ಬಯ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬೀಗ ಒಡೆದು ಒಳ ಪ್ರವೇಶ ಮಾಡಿದ ಪೊಲೀಸರಿಗೆ ಕೋಣೆಯಲ್ಲಿ ಅಂಗಾತವಾಗಿ ಬಿದ್ದಿರುವಂತೆ ವಿನಯ್ ಅವರ ಮೃತದೇಹ ಪತ್ತೆಯಾಗಿದೆ. ಬ್ಯಾಂಕ್ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ಸ್ವಗೃಹವಾದ ಗದಗ ಜಿಲ್ಲೆಗೆ ರವಾನಿಸಲಾಯಿತು.
ಮೈಸೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…
ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…
ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…
ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…
ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…