ವಿರಾಜಪೇಟೆ: ಅರಣ್ಯದ ಅಂಚಿನಲ್ಲಿ ವಾಸಮಾಡುವ ನಿವಾಸಿಗಳಿಗೆ ಅರಣ್ಯ ಕಾಯ್ದೆ ಅನ್ವಯ ಕೃಷಿ ಮಾಡಲು ಸ್ಥಳವನ್ನು ನೀಡಿದ್ದರೂ ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ನಿವಾಸಿಗಳಿಗೆ ವೈಯಕ್ತಿಕ ಪಹಣಿ ಪತ್ರವನ್ನು ನೀಡಬೇಕು ಎಂದು ಶಾಸಕರಾದ ಕೆ.ಜಿ. ಬೋಪಯ್ಯ ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನ ಚೆನ್ನಯ್ಯನಕೋಟೆ ಮತ್ತು ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಣ್ಯ ಅಂಚಿನಲ್ಲಿ ವಾಸ ಮಾಡುವ ನಿವಾಸಿಗಳಿಗೆ ವೈಯಕ್ತಿಕ ಪಹಣಿ ಪತ್ರ (ಆರ್.ಟಿ.ಸಿ.) ಹಾಗೂ ಕೃಷಿಗಾಗಿ ಬಳಸಲು ೧೦ ಹೆಚ್.ಪಿ ವಿದ್ಯುತ್ ಉಚಿತವಾಗಿ ನೀಡಬೇಕು ಎಂದು ಗ್ರಾಪಂ ಸದಸ್ಯರಾದ ಜೆ.ಕೆ.ಅಪ್ಪಾಜಿ ಅವರ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು.
ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಅರಣ್ಯ ಹಕ್ಕು ಅಧಿನಿಯಮದಂತೆ ಅರಣ್ಯ ಅಂಚಿನ ನಿವಾಸಿಗಳಿಗೆ ಹಕ್ಕುಪತ್ರ ನೀಡಲಾಗಿದ್ದು, ಕಂದಾಯ ಇಲಾಖೆಯಿಂದ ನೀಡಿರುವ ಪಹಣಿ ಪತ್ರದಲ್ಲಿ ಸಾಮೂಹಿಕವಾಗಿ ಕುಟುಂಬಗಳನ್ನು ಒಳಗೊಂಡ ಹಕ್ಕುಪತ್ರಗಳನ್ನು ನೀಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಮಾಲ್ದಾರೆ ಗ್ರಾಮ ಪಂಚಾಯಿತಿ ಸದಸ್ಯರಾದ ಜೆ.ಎಲ್.ಶೋಭ, ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ಸದಸ್ಯರಾದ ಜೆ.ಎ. ಜಯಮ್ಮ, ಲ್ಯಾಂಪ್ಸ್ ಸೊಸೈಟಿಯ ನಿರ್ದೇಶಕರಾದ ಜೆ.ಕೆ.ಅಣ್ಣಯ್ಯ, ಚಿಕ್ಕರೇಷ್ಮಯ್ಯ, ಪಿ.ಎಸ್.ಕಾಶಿ, ಪಿ.ರವಿ, ಪಿ.ಎಂ.ಮಲ್ಲ, ಪಾಪಣ್ಣ ಹಾಜರಿದ್ದರು.
ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್‌ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ…
ಮೈಸೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸೋಮವಾರ ನಗರದಲ್ಲಿ…
ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು…
ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ.…
ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ…
ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್…