ಹನೂರು: ಪ್ರತಿಯೊಬ್ಬರೂ ಗ್ರಂಥಾಲಯಕ್ಕೆ ಭೇಟಿ ನೀಡಿ ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು
ಕನ್ನಡಪ್ರಭ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಅಂಶಿ
ಪ್ರಸನ್ನಕುಮಾರ್ ತಿಳಿಸಿದರು.
ಪಟ್ಟಣದ ಜಿ.ವಿ ಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕಾಲೇಜು ವತಿಯಿಂದ ಅಯೋಜಿಸಿದ್ಧ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲೂಕು ಘಟಕ ಹಾಗೂ ಸಾಹಿತಿ ಡಾ.ಎಸ್ ಶಿವರಾಜಪ್ಪ ಅವರ ಬದುಕು – ಬರಹ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
ಚಾ.ನಗರ ಜಿಲ್ಲೆ ಸಾಹಿತ್ತಿಕವಾಗಿ ಶ್ರೀಮಂತಿಕೆಯಾಗಿದ್ದು, ಜನಪದ ಕಲೆಗಳ ತವರೂರಾಗಿದೆ. ಈ ಹಿಂದೆ ಮದ್ರಾಸ್ ಪ್ರಾಂತ್ಯಕ್ಕೆ ಸೇರಿತ್ತು. ಬಳಿಕ ಭಾಷವಾರು ಪ್ರಾಂತ್ಯವನ್ನು ರಚಿಸಲಾಯಿತು. ಈ ದಿಸೆಯಲ್ಲಿ ತಮಿಳುನಾಡಿಗೆ ಹೊಂದಿಕೊಂಡಂತಿರುವ ಗಡಿ ಭಾಗದಲ್ಲಿ ಕನ್ನಡದ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಸಲುವಾಗಿ ವೇದಿಕೆ ಕಲ್ಪಿಸಿರುವುದು ನಿಜಕ್ಕೂ ಉತ್ತಮ ಬೆಳವಣಿಗೆ. ಕನ್ನಡಕ್ಕೆಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿದ್ದು, ಭಾಷಾ ಪ್ರೌಢಿಮೆಯನ್ನು ಎತ್ತಿ ಹಿಡಿಯುತ್ತದೆ.
ಆದರೆ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಆಧುನಿಕ ತಂತ್ರಜ್ಞಾನಕ್ಕೆ ಮಾರು ಹೋಗಿದ್ದು, ಹೆಚ್ಚು ಮೊಬೈಲ್ ಬಳಕೆಯಲ್ಲಿ ತೊಡಗಿದ್ದಾರೆ. ಆದ್ದರಿಂದ ದೃಶ್ಯ ಮಾದ್ಯಮ
ಮನಸ್ಸನ್ನು ಕೆರಳಿಸಿದರೆ ಸಾಹಿತ್ಯ ಮನಸ್ಸನ್ನು ಅರಳಿಸುತ್ತದೆ. ಹಾಗಾಗಿ ಸಾಹಿತ್ಯದ ಕಡೆ ಹೆಚ್ಚಿನ ಗಮನ ನೀಡಬೇಕು. ಈ
ದಿಸೆಯಲ್ಲಿ ಗ್ರಂಥಾಲಯಕ್ಕೆ ಭೇಟಿ ನೀಡಿ ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು. ಜತೆಗೆ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪತ್ರಿಕೆ ಓದುವ
ಹವ್ಯಾಸವನ್ನು ಹೊಂದಬೇಕು ಎಂದು ಸಲಹೆ
ನೀಡಿದರು.
ಮೈಸೂರು ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ ಚಂದ್ರಶೇಖರ್ ಮಾತನಾಡಿ, ಸಾಹಿತಿ ಡಾ.ಎಸ್ ಶಿವರಾಜಪ್ಪ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ೪೦ ವರ್ಷಗಳ ಸುಧಿರ್ಘ ಅವಧಿಯಲ್ಲಿ ೭೨
ಸ್ವತಂತ್ರ ಕೃತಿ, ೫೯ ಸಂಪಾದಿತ ಕೃತಿಗಳನ್ನು ರಚಿಸಿದ್ದು, ಇವರ ಸಾಹಿತ್ಯ ಸಾಧನೆಗೆ ಸಿದ್ದಗಂಗಾ ಶ್ರೀ, ಬಸವ, ಹೊಯ್ಸಳ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮೈಸೂರುಮಹಾರಾಜ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ,
ಗಾಂಧಿಭವನದ ನಿರ್ದೇಶಕರಾಗಿ ಉತ್ತಮ ಸೇವೆಯನ್ನು ಸಲ್ಲಿಸಿದ್ದು, ಇವರ ಮಾರ್ಗದರ್ಶನದಲ್ಲಿ ೨೦ಕ್ಕೂ ಹೆಚ್ಚು
ವಿದ್ಯಾರ್ಥಿಗಳು ಪಿಹೆಚ್.ಡಿ ಪ್ರಬಂಧ ಮಂಡಿಸಿರುವುದು ಹೆಮ್ಮೆಯ ವಿಷಯ ಎಂದರು.
ಈ ಸಂದರ್ಭದಲ್ಲಿ ನಿವೃತ್ತ ಪ್ರಾಧ್ಯಾಪಕ ಡಾ.ಎಸ್
ಶಿವರಾಜಪ್ಪ, ಸಾಹಿತಿಗಳಾದ ಟಿ.ಸತೀಶ್ ಜವರೇಗೌಡ,
ಡಿ.ಪಿ ಚಿಕ್ಕಣ್ಣ, ಪ್ರಾಂಶುಪಾಲ ಶೈಲೇಶ್ ಕುಮಾರ್,
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲೂಕು
ಅಧ್ಯಕ್ಷ ಕಂದವೇಲು ದೈಹಿಕ ಶಿಕ್ಷಣ
ಪರಿವೀಕ್ಷಕ ಮಹದೇವ ಹಾಗೂ ಕಾಲೇಜಿನ
ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು .
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…