ಜಿಲ್ಲೆಗಳು

ಶೋಷಿತರ ಮತ್ತು ಧಮನಿತರ ಧ್ವನಿ- ಡಾ.ಅಮ್ಮಸಂದ್ರ ಸುರೇಶ್

ಮಂಜುಕೋಟೆ

ಹೋರಾಟ ಮತ್ತು ಸಾಹಿತ್ಯ ಕ್ಷೇತ್ರದ ನಿಸ್ವಾರ್ಥ ಸೇವೆಗಾಗಿ ಒಲಿದ ಸಮ್ಮೇಳನಾಧ್ಯಕ್ಷ ಸ್ಥಾನ

ಸಮಾಜದಲ್ಲಿನ ಶೋಷಿತರ, ಧಮನಿತರ, ನೆಲೆ ಇಲ್ಲದ ಸಮುದಾಯಗಳ ಬದುಕು-ಬವಣೆಗಳನ್ನು ತನ್ನ ಲೇಖನಿಯ ಮೂಲಕ ಸಮಾಜದ ಮುಂದಿಟ್ಟು ಅಂತಹ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸುವ ಮೂಲಕ ಅಲೆಮಾರಿ, ಅರೆ ಅಲೆಮಾರಿ, ಆದಿವಾಸಿ-ಬುಡಕಟ್ಟು ಜನರು ಅನುಭವಿಸುತ್ತಿರುವ ನೋವುಗಳನ್ನು ತೆರೆದಿಟ್ಟು ಸಮಾಜ ಮತ್ತು ಸರ್ಕಾರಗಳ ಕಣ್ತೆರೆಸಿದವರು ಈ ಬಾರಿಯ ಹೆಗ್ಗಡದೇವನಕೋಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಡಾ.ಅಮ್ಮಸಂದ್ರ ಸುರೇಶ್.
ಪತ್ರಿಕೋದ್ಯಮ, ಸ್ನಾತಕೋತ್ತರ ಪದವಿ ಮತ್ತು ಮೈಸೂರು ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪಿಎಚ್.ಡಿ ಪಡೆದಿರುವ ಅಮ್ಮಸಂದ್ರ ಸುರೇಶ್‌ರವರು ಅಂಚೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರವೃತ್ತಿಯಲ್ಲಿ ಲೇಖಕ, ಅಂಕಣಕಾರ, ಹವ್ಯಾಸಿ ಅಭಿವೃದ್ಧಿ ಪತ್ರಕರ್ತ, ಅಭಿವೃದ್ಧಿ ಮತ್ತು ಕೃಷಿ ಪತ್ರಿಕೋದ್ಯಮ ವಿಷಯದ ಸಂಪನ್ಮೂಲ ವ್ಯಕ್ತಿ ಹಾಗೂ ಮಾಧ್ಯಮ ವಿಶ್ಲೇಷಕರಾಗಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ ಮತ್ತು ಅರೆ ಅಲೆಮಾರಿ ವೇದಿಕೆ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ ವಿಮುಕ್ತ ಬುಡಕಟ್ಟು ಸಮುದಾಯಗಳ ಮಹಾ ಒಕ್ಕೂಟಗಳ ಮಾಧ್ಯಮ ಸಲಹೆಗಾರರಾಗಿಯೂ ಅವರು ಸೇವೆ ಸಲ್ಲಿಸುತ್ತಿದ್ದಾರೆ.
ಕಳೆದ 32 ವರ್ಷಗಳಿಂದ 1500ಕ್ಕೂ ಹೆಚ್ಚು ಲೇಖನಗಳನ್ನು ಬರೆದಿರುವ ಅಮ್ಮಸಂದ್ರ ಸುರೇಶ್‌ರವರ ‘ಮಾಧ್ಯಮ ಲೋಕದ ಎಂಬ ಯೂಟ್ಯೂಬ್ ವಾಹಿನಿಯನ್ನು ಜೊತೆಗೆ ಬಹುತೇಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ದೂರಶಿಕ್ಷಣ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಮತ್ತು ಕೃಷಿ ಪತ್ರಿಕೋದ್ಯಮ ವಿಷಯಗಳನ್ನು ಬೋಧಿಸುವ ಮೂಲಕ 2021ರಿಂದ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಡಾ.ಅಮ್ಮಸಂದ್ರ ಸುರೇಶ್‌ರವರು, ಕನ್ನಡ ದಿನಪತ್ರಿಕೆಗಳಲ್ಲಿ ಕೃಷಿ ಸುದ್ದಿ, ಡಾ.ಅಂಬೇಡ್ಕರ್ ಮತ್ತು ಪತ್ರಿಕೋದ್ಯಮ, ಕೊರೊನಾ ತಂದ ಅನಿವಾರ್ಯತೆಗಳು, ಅಂಬೇಡ್ಕರ್ ಬೆಳಕಿನಲ್ಲಿ ಪತ್ರಿಕೋದ್ಯಮ, ಅಭಿವೃದ್ಧಿಗಾಗಿ ಸಂವಹನ, ಧೀಮಂತ ಪತ್ರಕರ್ತ ಡಾ.ಬಿ.ಆರ್.ಅಂಬೇಡ್ಕರ್, ಮಹಾನಾಯಕನ ಮಹಾ ಕೊಡುಗೆಗಳು, ನೆಲೆ ಇಲ್ಲದವರು, ಪತ್ರಿಕೋದ್ಯಮದ ಹೊನ್ನಾರು ಎಳೆದವರು, ಮಾಧ್ಯಮ: ಹಸಿ ಆಶಯ ಹುಸಿ ನಿರೀಕ್ಷೆ, ಮಹಾ ಮಾನವತಾವಾದಿ, ಅಸಮಾನತೆಯ ಉದಾರೀಕರಣ, ಸಂವಿಧಾನ: ನಾಡಿಮಿಡಿತ-ಜನಮಿಡಿತ ಕೃತಿಗಳನ್ನು ರಚಿಸಿದ್ದಾರೆ.
ಇವರೆ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯಿಂದ 2022ರ ‘ವಿಶ್ವಮಾನವ ಪ್ರಶಸ್ತಿ. ಕರ್ನಾಟಕ ಹೊಯ್ಸಳ ಸಂಘ ಮತ್ತು ಸವಿಗನ್ನಡ ಪತ್ರಿಕೆಗಳು ‘ಹೊಯ್ಸಳ. ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ‘ಸೇವಾ ಭೂಷಣ ಮತ್ತು ‘ಕರುನಾಡ ರತ್ನ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

andolanait

Recent Posts

ಬಹುರೂಪಿ ಬಾಬಾ ಸಾಹೇಬ್‌ | ಜ.11 ರಿಂದ 18ರವರೆಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು‌…

20 mins ago

ಹೊಸ ವರ್ಷಾಚರಣೆ ಸಂಭ್ರಮ : ಅಹಿತಕರ ಘಟನೆ ತಡೆಗೆ ಸಿಎಂ ಸೂಚನೆ

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…

51 mins ago

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

3 hours ago

ಉನ್ನಾವೋ ಅತ್ಯಾಚಾರ ಕೇಸ್:‌ ಆರೋಪಿ ಕುಲದೀಪ್‌ ಸಿಂಗ್‌ ಸೆಂಗರ್‌ ಜಾಮೀನಿಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…

3 hours ago

ರಾಜ್ಯದಲ್ಲಿ ಡ್ರಗ್ಸ್‌ ದಂಧೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…

3 hours ago

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ : ಯಾವುದು ನಂಬರ್‌ ಒನ್‌ ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…

4 hours ago