ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಿಲ್ಲಾಧಿಕಾರಿಗೆ ಪತ್ರ
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆಯ ಕುರಿತು ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮಹಾಪೌರರಾದ ಎಸ್.ಸತೀಷ್ ( ಸಂದೇಶ್ ಸ್ವಾಮಿ) ಅವರು ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ.
ಪತ್ರದಲ್ಲಿ ಅವರು,
ಮೈಸೂರು ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಹಾಗೂ ಬಡತನ ರೇಖೆಗಿಂತ ಕೆಳಗಿರುವ ಜನರೇ ಹೆಚ್ಚಾಗಿ ವಾಸವಾಗಿದ್ದಾರೆ. ಸುಶಿಕ್ಷಿತ ಮತದಾರರ ಸಂಖ್ಯೆ ಕಡಿಮೆ ಇದ್ದು, ದೋಷದಿದ ಕೂಡಿದ ಮತದಾರರ ಪಟ್ಡಿಯಿಂದ ಚುನಾವಣಾ ಸಂದರ್ಭದಲ್ಲಿ ಸಾಕಷ್ಡು ಅಕ್ರಮಗಳು ಈ ಕ್ಷೇತ್ರದಲ್ಲಿ ನಡೆಯುತ್ತಿದ್ದು, ಇದು ಕ್ಷೇತ್ರದ ಅಬಿವೃದ್ದಿಗೆ ಮಾರಕವಾಗಿದೆ. ಮೂರ್ನಾಲ್ಕು ದಶಕಗಳಿಂದ ಒಂದೇ ಕುಟುಂಬದ ಅಭ್ಯರ್ಥಿ ಇಲ್ಲಿ ಚುನಾಯಿತರಾಗುತ್ತಿದ್ದಾರೆ. ಕ್ಷೇತ್ರದಲ್ಲಿ ವಾಸವಿಲ್ಲದ ಹೊರಗಿನವರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವುದು ಹಾಗೂ ಸ್ಥಳೀಯರನ್ನು ಪಟ್ಟಿಯಿಂದ ತೆಗೆದು ಹಾಕಿ ಅವರನ್ನು ಮತದಾನದಿಂದ ಹೊರಗಿಡುವ ಕೆಲಸವನ್ನು ಮಾಡಲಾಗುತ್ತಿದೆ. ನರಸಿಂಹಕ್ಷೇತ್ರದಲ್ಲಿ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಸಮೀಕ್ಷಾ ಕಾರ್ಯಕ್ರಮ ನಡೆಸಿ ಸಂಪೂರ್ಣ ದೋಷ ಮುಕ್ತ ಮತದಾರರ ಪಟ್ಟಿಸಿದ್ದಪಡಿಸಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಹೆಸರುಗಳನ್ನು ಕೈಬಿಡುವ ಹಾಗೂ ಸೇರ್ಪಡೆ ಮಾಡಿಕೊಳ್ಳುವ ಮುನ್ನ ಮತ್ತೊಮ್ಮೆ ಆ ಮನೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿ ದೃಢಪಡಿಸಿಕೊಳ್ಳಬೇಕು ಚುನಾವಣೆ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ಮತದಾರರಿಗೆ ಗೊಂದಲ ಅಥವಾ ಯಾವುದೇ ರೀತಿಯ ವ್ಯತ್ಯಯ ಒಂಟಾದಲ್ಲಿ ಆಯಾ ಬಿ ಎಲ್ ಓ ಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಮತದಾರರ ಪಾತ್ರ ಅತ್ಯಂತ ಪ್ರಾಮುಖ್ಯತೆಯನ್ನು ಹೊಂದಿದ್ದು, ಅರ್ಹ ಎಲ್ಲಾ ಮತದಾರರನ್ನು ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು ಹಾಗೂ ಅನರ್ಹ ಮತದಾರರನ್ನು ಪಟ್ಟಿಯಿಂದ ತೆಗೆಯಬೇಕು. ಸಂಪೂರ್ಣ ದೋಷ ಮುಕ್ತ ಮತದಾರರ ಪಟ್ಟಿ ತಯಾರಿಸುವ ಮೂಲಕ ಮತದಾರರು ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಅವಣೆಯಲ್ಲಿ ಭಾಗವಹಿಸಿ ನಿರ್ಭಯವಾಗಿ ಧರ್ಮಪರಿಗಣನೆ, ಜಾತಿ, ಜನಾಂಗ, ಸಮುದಾಯ, ಭಾಷೆ ಅಥವಾ ಯಾವುದೇ ಪ್ರಚೋದನೆಗೆ ಒಳಗಾಗದೆ ಮತ ಚಲಾಯಿಸುವಂತಹ ಮುಕ್ತ ವಾತಾವರಣ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿಗಳಲ್ಲಿ ವಿನಂತಿಸಿದ್ದಾರೆ.
ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…
ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…
ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…
ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…
ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…